ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಕರ್ತವ್ಯಗಳಿಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ 2024 ರ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಗಳಿಗೆ , ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಎಫ್.ಸಿ.ಟಿ(FST), ಎಸ್.ಎಸ್.ಟಿ(SST), ವಿ.ವಿ.ಟಿ(VVT) ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ನಡೆದ ತರಬೇತಿ ಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾ ವಹಿಸಿ.
ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಿದರಲ್ಲದೆ ಚುನಾವಣೆಯು ಪ್ರಜಾಪ್ರಭುತ್ವ ಹಬ್ಬದ ರೀತಿಯಲ್ಲಿ ನಡೆಸೋಣ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತರಬೇತುದಾರ ಅಭಿಜಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

7 minutes ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

2 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

7 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

12 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

13 hours ago