ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಕರ್ತವ್ಯಗಳಿಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ 2024 ರ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಗಳಿಗೆ , ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಎಫ್.ಸಿ.ಟಿ(FST), ಎಸ್.ಎಸ್.ಟಿ(SST), ವಿ.ವಿ.ಟಿ(VVT) ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ನಡೆದ ತರಬೇತಿ ಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾ ವಹಿಸಿ.
ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಿದರಲ್ಲದೆ ಚುನಾವಣೆಯು ಪ್ರಜಾಪ್ರಭುತ್ವ ಹಬ್ಬದ ರೀತಿಯಲ್ಲಿ ನಡೆಸೋಣ ಎಂದು ಹೇಳಿದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…