ಚೆನ್ನಾದೇವಿ ಅಗ್ರಹಾರ ವಿಎಸ್ಎಸ್ ಎನ್ ಚುನಾವಣೆ: ನೂತನ ಅಧ್ಯಕ್ಷರಾಗಿ ಮದಗೊಂಡನಹಳ್ಳಿಯ ಎಂ.ಸಿ ಚಂದ್ರಶೇಖರ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಚೆನ್ನಾದೇವಿ ಅಗ್ರಹಾರ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಮದಗೊಂಡನಹಳ್ಳಿಯ ಎಂ.ಸಿ ಚಂದ್ರಶೇಖರ್ ಅವರು  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನೀಲವೇಣಿ ಅವರು ಆಯ್ಕೆ ಆಗಿದ್ದಾರೆ. ಚನ್ನಾದೇವಿ ಅಗ್ರಹಾರ ವಿ ಎಸ್ ಎಸ್ ಎನ್ ನಲ್ಲಿ 10 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಪ್ರಚಂಡ ಗೆಲುವು ಸಾಧಿಸಿದ್ದಾರೆ.

ನೂತನವಾಗಿ ವಿಎಸ್ಎಸ್ ಎನ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಸಿ ಚಂದ್ರಶೇಖರ್ ಹಾಗೂ ನೀಲವೇಣಿ ರವರನ್ನು ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ‌ ಮಾಜಿ ಉಪಾಧ್ಯಕ್ಷರು ಹಾಗೂ ಉಪಾಧ್ಯಕ್ಷರು ವಿಎಸ್ ಎಸ್ ಎನ್ ಕನಸವಾಡಿ ಮಂಜುನಾಥ ಟಿ ಸೇರಿದಂತೆ ಇತರೆ ಗಣ್ಯರು ಅಭಿನಂದಿಸಿದ್ದಾರೆ.

ನಿರ್ದೇಶಕರ ಪಟ್ಟಿ

ಜಿ.ಕೆಂಪೇಗೌಡ

ಸಿ.ಎಸ್ ಪುರುಷೋತ್ತಮಗೌಡ

ಬಿ.ಎಚ್ ಮುನಿರಾಜಯ್ಯ

ರಮೇಶ್

ನಾರಾಯಣಪ್ಪ ಎ

ಸುಧಾ

ಷಫೀಕ್ ಅಹಮದ್

ಎಂ.ಆರ್ ರಂಗೇಗೌಡ

ಈ ವೇಳೆ ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ  ಸದಸ್ಯ ದೀಪು, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಸೋಮಶೇಖರ್, ರವಿ ಗೌಡ ಪ್ರಭಾಕರ್, ಆರ್ ವಿ ಗೌಡ ಪ್ರಭಾಕರ್, ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷರ ಗಿರೀಶ್ ಕುಮಾರ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

16 minutes ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

1 hour ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

11 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

11 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

14 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

16 hours ago