ಬರೊಬ್ಬರಿ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಬಗ್ಗೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಭಾವುಕರಾಗಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದ್ದಾರೆ.
‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ. ಪ್ರತಿ ಸೀಸನ್‌ನಲ್ಲಿ ಟ್ರೋಫಿ ಗೆಲ್ಲಲು ಪ್ರಯತ್ನಿಸಿದೆ ಎಂದು ಹೇಳಿದರು.
‘ಈ ದಿನ ಬರುತ್ತದೆ ಎಂದು ಎಂದಿಗೂ ಭಾವಿಸಿರಲಿಲ್ಲ, ಗೆದ್ದ ನಂತರ ನಾನು ಭಾವುಕನಾದೆ. ನನ್ನ ಹೃದಯ ಬೆಂಗಳೂರಿನೊಂದಿಗೆ ಇದೆ, ನನ್ನ ಆತ್ಮ ಬೆಂಗಳೂರಿನೊಂದಿಗೆ ಇದೆ. ನಾನು ಈ ತಂಡಕ್ಕೆ ನಿಷ್ಠನಾಗಿ ಉಳಿದಿದ್ದೇನೆ. ಕಪ್ ಗೆಲ್ಲಬೇಕೆಂದು ನಾನು ಯಾವಾಗಲೂ ಕನಸು ಕಂಡಿದ್ದೆ. ಈ ಗೆಲುವಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಅಂತಿಮವಾಗಿ ಗೆಲುವನ್ನು ನನ್ನ ಮಡಿಲಿಗೆ ಕೊಟ್ಟಿದ್ದಕ್ಕಾಗಿ ದೇವರಿಗೆ ತುಂಬಾ ಕೃತಜ್ಞನಾಗಿದ್ದೇನೆ ಎಂದು ಭಾವುಕರಾದರು.
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…