ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ‌ ಸೊಣ್ಣಪ್ಪನಹಳ್ಳಿ ರಮೇಶ್ ನೇಮಕ

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ದೊಡ್ಡಬಳ್ಳಾಪುರ ತಾಲ್ಲೂಕಿನ ನೂತನ ಅಧ್ಯಕ್ಷರನ್ನಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ನೇಮಕ ಮಾಡಲಾಗಿದೆ.

ರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರು ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಪತ್ರವನ್ನು ನೀಡಿದ್ದಾರೆ ಎಂದು ಛಲವಾದಿ ಮುಖಂಡರಾದ ಗೂಳ್ಯ ಹನುಮಣ್ಣ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಮಾಹಿತಿ ನೀಡಿದ ಅವರು, ಕಳೆದ ಹಲವು ವರ್ಷಗಳಿಂದ ಸಮುದಾಯದ ಕೆಲಸಗಳನ್ನು ನಾವು ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಸೇವೆಯನ್ನು ಗುರುತಿಸಿ ತಮ್ಮ ಕಚೇರಿಗೆ ಕರೆಸಿಕೊಂಡ ಸಿದ್ದಯ್ಯನವರು ಕಳೆದ ಕೆಲ ವರ್ಷಗಳಿಂದ ತಾಲ್ಲೂಕಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ದಿಗಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದರು.

ಛಲವಾದಿ ಹಿರಿಯ ಮುಖಂಡರಾದ ಮರಿಯಪ್ಪ ಮಾತನಾಡಿ, ನಮ್ಮ ಸಮುದಾಯಕ್ಕೆ ಮತ್ತಷ್ಟು ಬಲ ತುಂಬಲು, ಸಮುದಾಯದ ಅಭಿವೃದ್ದಿಗಾಗಿ ತಾಲ್ಲೂಕಿನಲ್ಲಿ ಕೆಲಸ ಮಾಡಲೆಂದು ರಾಜ್ಯಾಧ್ಯಕ್ಷರಾದ ಸಿದ್ದಯ್ಯನವರು ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೂತನ ಅಧ್ಯಕ್ಷರನ್ನಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನ ನೇಮಕ ಮಾಡಿ ಆದೇಶಿಸಿದ್ದಾರೆ. ಸದ್ಯ ಅವರ ಬೆಂಬಲಕ್ಕೆ ನಿಂತು ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದರು.

ಮುಖಂಡರಾದ ಮುನಿರಾಜು ಮಾತನಾಡಿ, ಛಲವಾದಿ ಮಹಾಸಭಾವು ನಮ್ಮ ತಾಲ್ಲೂಕಿನಲ್ಲಿ ಕಳೆದ 20 ವರ್ಷಗಳಿಂದ ಉತ್ತಮವಾಗಿ ಸಮುದಾಯದ ಸೇವೆಯನ್ನು ಮಾಡಿಕೊಂಡು ಬಂದಿದೆ. ಇತ್ತೀಚೆಗೆ ತಾಲೂಕಿನ ಕೆಲ ಮುಖಂಡರು ಸಮುದಾಯವನ್ನು ಕಡೆಗಣಿಸಿದ್ದನ್ನು ಮನಗಂಡ ರಾಜ್ಯಮಟ್ಟದ ನಾಯಕರು ಇದೀಗ ಸಮುದಾಯದ ಬೆಳವಣಿಗೆಗಾಗಿ ನೂತನ ಅಧ್ಯಕ್ಷರನ್ನಾಗಿ ರಮೇಶ್ ಅವರನ್ನು ನೇಮಕ ಮಾಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಂಡು ಇನ್ನು ಮುಂದೆ ತಾಲ್ಲೂಕಿನಲ್ಲಿರುವ ಸಮುದಾಯದ ಜನತೆಗೆ ಸರ್ಕಾರದಿಂದ ಸಿಗಬೇಕಾದ ಸೇವೆಗಳನ್ನು ಸಿಗುವಂತೆ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ನೂತನ ತಾಲ್ಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಛಲವಾದಿ ಕಾರ್ಯಕರ್ತನಾಗಿ ದುಡಿದಿದ್ದೇನೆ. ಇನ್ನು ಮುಂದೆಯೂ ಕೂಡ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ರಾಜ್ಯಾಧ್ಯಕ್ಷರು ನನ್ನ ಮೇಲೆ ಇರಿಸಿರುವ ನಂಬಿಕೆಯನ್ನು ಉಳಿಸಿಕೊಂಡು ತಾಲೂಕಿನ ಜನತೆಯ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನೂತನ ತಾಲ್ಲೂಕು ಅಧ್ಯಕ್ಷರನ್ನು ಸಮುದಾಯದ ಮುಖಂಡರು ಹಾರ ಹಾಕಿ ಶಾಲು ಹಾಕಿ ಸನ್ಮಾನಿಸಿದರು.

ಈ ವೇಳೆ ರಮೇಶ್, ಅಜಯ್ ಕುಮಾರ್, ತಳಗವಾರ ಸತೀಶ್, ಸೇರಿದಂತೆ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

43 minutes ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

13 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago