ಜಕ್ಕಲಮಡಗು ಜಲಾಶಯದ ನೀರಿಗೆ ಬಾಗಿನ ಅರ್ಪಿಸಿದ ಶಾಸಕ ಧೀರಜ್ ಮುನಿರಾಜ್

ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ‌. ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ‌ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ‌ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡು, ಜಲಾಶಯದ ನೀರಿಗೆ ಬಾಗಿನ ಅರ್ಪಿಸಿದರು.

ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.

ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago