Categories: ರಾಜ್ಯ

ಜಗಜೀವನ್ ರಾಂ ಅವರು ಮಹಾನ್ ದೇಶಪ್ರೇಮಿ ಹಾಗೂ ಪ್ರಜಾಪ್ರಭುತ್ವವಾದಿ- ಸಿಎಂ ಸಿದ್ದರಾಮಯ್ಯ

ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು  ಹೋರಾಟ ಮಾಡಿದ ಎಲ್ಲರಿಗೂ ಈ  ಮುಂದೆ  ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.

ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ ಎಂದರು.

ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

5 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

7 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

8 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

17 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

19 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

1 day ago