ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ ಎಲ್ಲರಿಗೂ ಈ ಮುಂದೆ ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.
ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ ಎಂದರು.
ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…