ಜಗನ್ ಮೋಹನ್ ರೆಡ್ಡಿ ರೋಡ್ ಶೋ: ಕಾರಿನ ಚಕ್ರಕ್ಕೆ ವೈಎಸ್‌ಆರ್‌ಸಿಪಿ ಪಕ್ಷದ ಬೆಂಬಲಿಗ ಸಿಲುಕಿ ಸಾವು

ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ….

ವೈಎಸ್‌ಆರ್‌ಸಿಪಿ ಪಕ್ಷದ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ.

ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಜಗನ್‌ ಮೋಹನ್‌ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ನೆರೆದಿದ್ದರು. ಅಲ್ಲದೇ ಜಗನ್​​ ಗೆ ಹಾರ ಹಾಕಿ ಕೈ ಕುಲುಕಲು ಮುಗಿಬಿದ್ದಿದ್ದು, ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರಿನ ಮುಂಭಾಗದಲ್ಲಿ ಬಿದ್ದಿದ್ದಾನೆ.  ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಗಾಲಿ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿದ್ದಾನೆ.

ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆಕ್ರೋಗಳು ವ್ಯಕ್ತವಾಗುತ್ತಿವೆ.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

2 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

4 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

6 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

6 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

11 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

12 hours ago