ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಸಮೀಪ್ ಬಾರ್ ಮುಂಭಾಗದಲ್ಲಿ ಅ.4ರ ರಾತ್ರಿ ಸುಮಾರು 11.20ಕ್ಕೆ ಘಟನೆ ನಡೆದಿದೆ.

112 ತುರ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಣಿಕಂಠ ಹೆಚ್.ಪಿ ಹಾಗೂ ಚಾಲಕ ರಾಯಪ್ಪ ಪೂಜಾರಿ ಗಾಯಗೊಂಡಿದ್ದಾರೆ.

ಘಟನೆ ವಿವರ

ಪಾಲನಜೋಗಿಹಳ್ಳಿ ಬಳಿ ಆಂಬ್ಯುಲೆನ್ಸ್ ಚಾಲಕನೊಬ್ಬ 112 ತುರ್ತು ಸೇವೆಗೆ ಕರೆ ಮಾಡಿ ಜಗಳದ ಬಗ್ಗೆ ಮಾಹಿತಿ ನೀಡಿದ್ದ. ಕೂಡಲೇ ಸಮವಸ್ತ್ರದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿದಾಗ, ಒಬ್ಬ ವ್ಯಕ್ತಿ ಕೆಳಗೆ ಬಿದ್ದಿದ್ದು ಮತ್ತೊಬ್ಬ ಆತನ ಮೇಲೆ ಹಲ್ಲೆ ನಡೆಸುತ್ತಿದ್ದ. ಜಗಳ ಬಿಡಿಸಲು ಪೊಲೀಸರು ಮುಂದಾದ ವೇಳೆ ಹಲ್ಲೆ ನಡೆಸುತ್ತಿದ್ದ ವ್ಯಕ್ತಿ ಪೊಲೀಸರ ಸಮವಸ್ತ್ರ ಹಿಡಿದು ಎಳೆದಾಡಿ, ಮುಖ, ಎದೆ ಹಾಗೂ ಹೊಟ್ಟೆಗೆ ಹೊಡೆದು ಕಾಲಿನಿಂದ ತುಳಿಯುತ್ತಿರುವುದು, ಈ ವೇಳೆ ನೆಲಕ್ಕೆ ಬಿದ್ದಿದ್ದ ವ್ಯಕ್ತಿಯೂ ಕೂಡ ಮೇಲಕ್ಕೆ ಎದ್ದು ಇಬ್ಬರು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾನೆ. ಆರೋಪಿಗಳು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಮವಸ್ತ್ರ ಹರಿದು ಹಾಕಿದ್ದಲ್ಲದೆ, ಕರ್ತವ್ಯಕ್ಕೆ ಬಳಸುತ್ತಿದ್ದ ಸರ್ಕಾರಿ ಜೀಪ್‌ಗೂ ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದು, ಮರ್ಮಾಂಗಕ್ಕೆ ಒದ್ದಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಘಟನೆಯಲ್ಲಿ ಪೊಲೀಸರ ಮುಖ, ಎದೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಾತ್ರಿ ಕರ್ತವ್ಯದಲ್ಲಿದ್ದ ಗ್ರಾಮಾಂತರ ಠಾಣೆಯ ಎಎಸ್‌ಐ ರಾಧಾಕೃಷ್ಣ ಸ್ಥಳಕ್ಕೆ ಆಗಮಿಸಿ ಪೊಲೀಸರನ್ನು ರಕ್ಷಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲನಜೋಗಿಹಳ್ಳಿ ರಾಜೀವಗಾಂಧಿ ಕಾಲೋನಿ ನಿವಾಸಿಗಳಾದ ಎ1 ಹರಹಾನ್ ಹಾಗೂ ರಿಹಾನ್, ಎ2 ಗಿಡ್ಡು ಅಲಿಯಾಸ್ ಬಶೀರ್ ಎಂಬುವವರ ವಿರುದ್ಧ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ, ಜೀವಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 hour ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

4 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

9 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

10 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

2 days ago