ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…