Categories: ಕೋಲಾರ

ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ

ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

1 hour ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

6 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

8 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

11 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

23 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago