Categories: ಕೋಲಾರ

ಜನತೆಯ ನೆಮ್ಮದಿ ಬದುಕಿಗೆ ಬಿಎಸ್ಪಿ ಬೆಂಬಲಿಸಿ: ಸುರೇಶ್

ಕೋಲಾರ: ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು, ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ಒಂದೇ ನಾಣ್ಯದ ಮುಖಗಳು ಇದ್ದಂತೆ. ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಪಿ ಸುರೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಸುಮಾರು 75 ವರ್ಷಗಳಿಂದ ಅಧಿಕಾರದಲ್ಲಿ ಇದ್ದ ಪಕ್ಷಗಳಿಂದ ಇದುವರೆಗೂ ಬಡತನ ನಿರ್ಮೂಲನೆವಾಗಲಿಲ್ಲ, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸರಕಾರಗಳು ಕಾಳಜಿ ವಹಿಸಲಿಲ್ಲ ಜನರ ನೆಮ್ಮದಿಯ ಬದುಕು ಅಕ್ಕ ಮಯಾವತಿ ಅವರ ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯವಿದ್ದು ಅನಿಟ್ಟಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮೋದಿ ಸರಕಾರ ಬಂದ ನಂತರ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಕಾನೂನನ್ನು ಜಾರಿಗೆ ಮಾಡಲು ಹೊರಟಿದ್ದಾರೆ ಸಾರ್ವಜನಿಕರ ತೆರಿಗೆ ಹಣವನ್ನು ಈ ರೀತಿ ಬಂಡವಾಳಶಾಹಿಗಳ ಅಭಿವೃದ್ಧಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ ಇವರುಗಳಿಂದ ದೇಶ ಎಂದಿಗೂ ಅಭಿವೃದ್ದಿಯಾಗದು. ಇಂತಹ ಪಕ್ಷಗಳನ್ನು ದೂರವಿಟ್ಟು ಬಡವರಿಗಾಗಿ ಶ್ರಮಿಸುತ್ತಿರುವ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ಧರ್ಮವನ್ನು ಸಹಿಷ್ಣುತೆಯಿಂದ ಕಾಣುತ್ತಿರುವ ಬಿ.ಎಸ್.ಪಿ. ಪಕ್ಷವನ್ನು ಬೆಂಬಲಿಸಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯಿಂದ ಗೆದ್ದ ಲೋಕಸಭಾ ಸದಸ್ಯರು ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಕಾಳಜಿ ವಹಿಸಲಿಲ್ಲ ದೇವಸ್ಥಾನ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಹೊಡೆದು ಆಳುವ ನೀತಿಗಳನ್ನು ಅನುಸರಿಸಿದ್ದಾರೆ. ಜೆಡಿಎಸ್‌ ಬಿಜೆಪಿ ಪಕ್ಷಗಳು ಮೈತ್ರಿಯಾಗಿದ್ದು ಈಗಾಗಲೇ ಈ ಮೂರು ಪಕ್ಷವನ್ನು ಗೆಲ್ಲಿಸಿ ನೋಡಿ­ದ್ದೀರಿ. ಅವರನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಿ ನನಗೆ ಒಂದು ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಬಿ.ವಿ ನಾಗಪ್ಪ, ಸಂಯೋಜಕರಾದ ಮಧುಸೂದನ್, ರಮಣ್ ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಅಂಬರೀಶ್, ನಾರಾಯಣಸ್ವಾಮಿ ಇದ್ದರು

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

1 hour ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

16 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago