Categories: ಕೋಲಾರ

ಜನರಿಗೆ ಜಾಗೃತಿ ಮೂಡಿಸಲು, ಸರಿಯಾದ ಮಾಹಿತಿ ತಲುಪಿಸಲು ಮಾಧ್ಯಮ ಬೇಕು-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ

ಜನರಿಗೆ ಜಾಗೃತಿ ಮೂಡಿಸಲು, ಸರಿಯಾದ ಮಾಹಿತಿ ತಲುಪಿಸಲು ಮಾಧ್ಯಮ ಬೇಕು. ಸಮಾಜದಲ್ಲಿನ ತಪ್ಪುಗಳನ್ನು ಹೊರತರಲು ಜೊತೆಯಾಗಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶುಕ್ರವಾರ ಆಯೋಜಿಸಿದ್ದ ಸಂವಾದ ಮತ್ತು ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ಭಾರತೀಯ ನ್ಯಾಯ ಸಂಹಿತೆ ಕುರಿತು ಪತ್ರಕರ್ತರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಜನತೆಗೆ ತಿಳಿವಳಿಕೆ ಮೂಡಿಸುವುದು. 15 ದಿನಕ್ಕೊಮ್ಮೆ ಆರಕ್ಷಕರ ದಿನ ಆಚರಣೆ. ಮಾದಕ ವಸ್ತುಗಳ ಬಗ್ಗೆ ಶಾಲಾ ಕಾಲೇಜುಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುವುದು. ಪ್ರಕರಣ ದಾಖಲಾದರೆ ಭವಿಷ್ಯದ ಮೇಲೆ ಯಾವ ರೀತಿ ಪರಿಣಾಮ ಉಂಟಾಗುತ್ತದೆ ಎಂಬುದರ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು. ಪ್ರಾಥಮಿಕ ಶಾಲಾ ಮಕ್ಕಳನ್ನು ಠಾಣೆಗೆ ಕರೆಯಿಸಿ “ತೆರೆದ ಮನೆ” ಕಾರ್ಯಕ್ರಮ ನಡೆಸುವ ಮೂಲಕ ಅರಿವು ಮೂಡಿಸಲಾಗುವುದು ಎಂದರು.

ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅಪರಾಧ ಸಂಬಂಧ ಸಮನ್ವಯ ಸಾಧಿಸಬೇಕು. ಈ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ಈಗಾಗಲೇ ಎರಡು ಸಭೆ ನಡೆದಿದೆ. ಮಹಿಳೆಯರು ಹಾಗೂ ಹಿರಿಯ ನಾಗರೀಕರಿಗೆ ಧೈರ್ಯ ತುಂಬುವುದು ನಮ್ಮ ಆದ್ಯತೆ. ದೂರು ಕೊಡಲು ಬರುವವರ ಮಾತು ಆಲಿಸಬೇಕು ನಂತರ ಕ್ರಮ ವಹಿಸಬೇಕೆಂದು ಹೇಳಿದರು.

ಬಿ.ಎನ್.ಎಸ್ ಬಗ್ಗೆ ಗೊತ್ತಿರಬೇಕು. ದೇಶದ ಯಾವುದೇ ಭಾಗದಲ್ಲಿ ಘಟನೆ ನಡೆದರೂ ಬೇರೆ ಯಾವುದೇ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು. ಆದರೆ, ತನಿಖೆ ಮಾತ್ರ ಅದೇ ಠಾಣೆಯಲ್ಲಿ ನಡೆಯುತ್ತದೆ. ಆನ್ ಲೈನ್ ಮೂಲಕ ದೂರು ದಾಖಲಿಸಬಹುದು. ಆದರೆ, ಠಾಣೆಗೆ ಬಂದು ಇ ಸಿಗ್ನೇಚರ್ ಮಾಡಿದ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ ಎಂದು ವಿವರಿಸಿದರು.

ಏಳು ವರ್ಷದ ಮೇಲಿನ ಪ್ರಕರಣಗಳಲ್ಲಿ ವಿಡಿಯೊ ರೆಕಾರ್ಡ್ ಮಾಡಬಹುದು. ಹೀನಿಯಸ್ ಅಪರಾಧ ವಿಡಿಯೊ ರೆಕಾರ್ಡ್ ಮಾಡುತ್ತಿದ್ದೇವೆ. ನಮ್ಮಲ್ಲಿ ಪೈಲಟ್ ಕಾರ್ಯಕ್ರಮವಾಗಿ ಪರಿಗಣಿಸುತ್ತಿದ್ದೇವೆ.

7 ವರ್ಷದ ಕೆಳಗಿನ ಶಿಕ್ಷೆಯ ಪ್ರಮಾಣದ ಪ್ರಕರಣಗಳಿಗೆ ಬಂಧನ ಮಾಡಬೇಕಾದರೆ ಡಿಎಸ್ಪಿ ಅನುಮತಿ ಬೇಕಾಗುತ್ತದೆ. ಎಫ್.ಐ.ಆರ್ ಗೆ ಮೊದಲು 15 ದಿನ ಡಿಎಸ್ಪಿ ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸುವ ಅವಕಾಶವೂ ಇದೆ ಎಂದು ಹೇಳಿದರು.

ರೇಪ್ ವಿಕ್ಟಿಮ್ ಗೆ ವೈದ್ಯಕೀಯ ಪರೀಕ್ಷೆಗೆ ಸಮಯ ನಿಗಧಿಪಡಿಸಿದ್ದಾರೆ. ಮಹಿಳಾ ವೈದ್ಯರೇ ಪರೀಕ್ಷೆ ನಡೆಸಬೇಕು. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಕೊಳ್ಳಲಾಗಿದೆ. ಹಾಗೆಯೇ ಹಿರಿಯ ನಾಗರಿಕರು ಅಥವಾ ಮಹಿಳೆಯರಿಂದ ಹೇಳಿಕೆ ಪಡೆಯಲು ಅವರ ಮನೆಗೆ ಹೋಗಿ ಪಡೆಯಬಹುದು. ಹಿಂದೆ ಠಾಣೆಗೆ ಬರಬೇಕಿತ್ತು. ಭದ್ರತಾ ದೃಷ್ಟಿಯಿಂದ ಈ ಕ್ರಮ ವಹಿಸಲಾಗಿದೆ ಎಂದರು. ನ್ಯಾಯಾಲಯದಲ್ಲಿ ಈ ಅಂಶಗಳನ್ನು ಪ್ರಶ್ನೆ ಮಾಡಬಹುದು.

ಬಿ.ಎನ್.ಎಸ್‌ನಲ್ಲಿ ಶಿಕ್ಷೆ ಸಮುದಾಯ ಸೇವೆ ಮಾಡುವ ನಿಯಮ ತರಲಾಗಿದೆ. ಇದು ನ್ಯಾಯಾಲಯ ಕೊಡುತ್ತದೆ. ಅಪರಾಧಿ ಸುಧಾರಣೆಗೆ ಈ ನಿಯಮ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪೊಲೀಸರಿಗೆ 8 ಕಾರ್ಯಾಗಾರ ನಡೆಸಲಾಗಿದೆ. ಪತ್ರಕರ್ತರಲ್ಲದವರು ಪ್ರೆಸ್ ಎಂಬ ಫಲಕ ಹಾಕಿರುವ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ಔಷಧಿ ಅಂಗಡಿ ಹೊರತುಪಡಿಸಿ ರಾತ್ರಿ 11 ಗಂಟೆಯೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಆದೇಶದ ಬಗ್ಗೆ ಮಾಹಿತಿ ನೀಡಿ ಕೋಲಾರ ಜಿಲ್ಲಾ ಪತ್ರಕರ್ತರ ಸಂಘವು ಮಾದರಿ ಪತ್ರಕರ್ತರ ಸಂಘವಾಗಿದೆ. ಇಡೀ ರಾಜ್ಯದಲ್ಲಿ ಈ ರೀತಿಯ ಕಾರ್ಯಕ್ರಮ ಎಲ್ಲೂ ನೋಡಿಲ್ಲ. ಇಲ್ಲಿಯ ಜನರು ಪರಿಶ್ರಮಿಗಳು ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ಡಿ.ಸಿ, ಸಿಇಒ, ಎಸ್.ಪಿ ಆಡಳಿತ ಆಧಾರ ಸ್ತಂಭಗಳು. ಭಾರತೀಯ ನ್ಯಾಯ ಸಂಹಿತೆ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರಬೇಕು. ಪತ್ರಕರ್ತರು ಹಾಗೂ ಪೊಲೀಸರ ನಡುವೆ ಉತ್ತಮ ಬಾಂಧವ್ಯ ಇರಲಿ. ಪ್ರೆಸ್ ಸ್ಟಿಕರ್ ಕೊಡಿ. ದುರ್ಬಳಕೆ ಬೇಡ. ಪತ್ರಕರ್ತರಲ್ಲದ ಯಾರೋ ಯಾರೋ ಪ್ರೆಸ್ ಸ್ಟಿಕರ್ ಅಂಟಿಸಿಕೊಂಡಿರುತ್ತಾರೆ ಇದರ ಬಗ್ಗೆ ಗಮನ ವಹಿಸಬೇಕು ಎಂದರು.

ವೇದಿಕೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ ಕುಮಾರ್ ಸೇರಿದಂತೆ ಪತ್ರಕರ್ತರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

4 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

10 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

22 hours ago