ಜನರು ರಾಜ್ಯದಲ್ಲಿ ಬದಲಾವಣೆ ಬಯಸಿದ್ದಾರೆ: ಕಟ್ಟಾ ಸುಬ್ರಮಣ್ಯ ನಾಯ್ಡು

ಜನರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ನ್ನು ಈ ಬಾರಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಗೆಲ್ಲಲು ಪ್ರಣಾಳಿಕೆ ಕೂಡ ಮಹತ್ತರ ಪಾತ್ರ ವಹಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿಂದು 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಪ್ರತಿಯೊಬ್ಬ‌ ಮಹಿಳೆಯರಿಗೆ ಪ್ರತಿ ತಿಂಗಳು ಎರಡು‌ ಸಾವಿರ ರೂ. ಹತ್ತು ಕೆಜಿ ಅಕ್ಕಿ, ಉಚಿತ ಸಿಲಿಂಡರ್ ಸೇರಿದಂತೆ ಇತರೆ ಅಂಶಗಳಿಗೆ ಮನಸೋತು ಕಾಂಗ್ರೆಸ್ ಗೆ ಮತ ನೀಡಿದ್ದಾರೆ ಎಂದರು.

ಈ ಬಾರಿ ಕಾಂಗ್ರೆಸ್ ಬಹುಮತ ಪಡೆದಿದೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅದರಲ್ಲಿ ಏನೂ ವಿಶೇಷತೆ ಇಲ್ಲ‌, ಯಾರೂ ಕೂಡ ದೀರ್ಘಕಾಲದ ಅಧಿಕಾರ, ಆಡಳಿತ ನಡೆಸುವುದಕ್ಕೆ ಆಗೋದಿಲ್ಲ, ಬದಲಾವಣೆ ಸಹಜ‌ ಕ್ರಿಯೆ ಎಂದು ಹೇಳಿದರು.

ಈ ಬಾರಿ ಬಿಜೆಪಿ ಸೋತಿದೆ ಎಂಬ ಕಾರಣಕ್ಕೆ ಬಿಜೆಪಿ ಮುಕ್ತ ಕರ್ನಾಟಕ ಎಂದು ಹೇಳೋದಕ್ಕೆ ಬರೋದಿಲ್ಲ, ಜನರ ತೀರ್ಪಿಗೆ ನಾವು ತಲೆ ಬಾಗಿಸಲೇಬೇಕು. ಐದು ವರ್ಷ ನಂತರ ಜನ ಬಿಜೆಪಿಯನ್ನ ಗೆಲ್ಲಿಸಬಹುದು ಆದ್ದರಿಂದ ಇಲ್ಲಿನ ಕಾಲಚಕ್ರದಲ್ಲಿ ಯಾರೂ ಶಾಶ್ವತ ಅಲ್ಲ ಎಂದರು.

ಈ ಬಾರಿ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಹಿರಿಯರು ಕೂತು ವಿಶ್ಲೇಷಣೆ, ಮಾಹಿತಿ ಸಂಗ್ರಹ ಮಾಡಿ ಎಲ್ಲಿ ಯಾವ ವಿಷಯದಲ್ಲಿ ಮತ ಪಡೆಯುವಲ್ಲಿ ವಿಫಲವಾಗಿದ್ದೇವೆ, ಮತದಾರರು ಬಿಜೆಪಿಯನ್ನು ತಿರಸ್ಕರಿಸಲು ಕಾರಣಗಳೇನು ಎಂಬುದನ್ನು ಕಂಡುಹಿಡಿದು ಅದನ್ನು ಮುಂದಿನ ಬಾರಿಗೆ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.

ನಾನೇನು ರಾಜಕೀಯದಲ್ಲಿ ನಿಷ್ಕ್ರಿಯವಾಗಿಲ್ಲ, ಕೆಲವೊಂದು ಸಂದರ್ಭಗಳು ಹಾಗೆ ಮಾಡಿದೆ. ನನಗೆ ವಯಸ್ಸಾಗಿದೆ, ಯುವಕರಿಗೆ ಅವಕಾಶ ಸಿಗಬೇಕು, ಪಕ್ಷದ ಸಿದ್ಧಾಂತಕ್ಕೆ ನಾವು ಕಟ್ಟುಬೀಳಬೇಕು ಎಂದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 hour ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

3 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

5 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

5 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

7 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

12 hours ago