ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ-ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌

ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹಳೇಹಳ್ಳಿ, ಶ್ಯಾಂಪುರ, ಗೌಡಗೆರೆ, ಪುರ, ಜರಬಂಡಹಳ್ಳಿ, ಮಿಣಕನಗುರ್ಕಿ, ಮಂಚೇನಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ಈ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ 400 ಮೀರಿ ಸ್ಥಾನಗಳು ಲಭ್ಯವಾಗಲಿದೆ. ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳಿಗೆ 40 ಸ್ಥಾನ ಲಭ್ಯವಾಗಲಿದೆ. ಮೋದಿಗೆ ಜೈಕಾರ ಹಾಕುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ಆದರೆ ಫಲಿತಾಂಶದ ದಿನ ಭಾರತೀಯರು ಕಾಂಗ್ರೆಸ್‌ಗೆ ಕಪಾಳ ಮೋಕ್ಷ ಮಾಡಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ‌ಮೋದಿಯವರ ಸಮಾಗಮಕ್ಕೆ‌ ಜನರು ಮತ ನೀಡಲಿದ್ದಾರೆ ಎಂದರು.

ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಹಣ ಖಾಲಿ ಮಾಡಿಕೊಂಡಿದೆ. ನಂತರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ. ಇವರು ಬಂದಾಗೆಲ್ಲ ಬರಗಾಲ ಬರುತ್ತದೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅಧಿಕ ಮಳೆಯಾಗಿತ್ತು. ಅದಕ್ಕೆ ಕೂಡ ದುಪ್ಪಟ್ಟು ಪ್ರಮಾಣದಲ್ಲಿ ಒಂದೇ ತಿಂಗಳಲ್ಲಿ ಪರಿಹಾರ ನೀಡಲಾಗಿತ್ತು. ಈಗ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ ಎಂದರು.

ನನ್ನ ವಿರುದ್ಧ ಕಾಂಗ್ರೆಸ್‌ನಿಂದ ಶ್ರೀಮಂತರನ್ನು ನಿಲ್ಲಿಸಲಾಗಿದೆ. ಆದರೆ ಹಣಬಲಕ್ಕಿಂತ ಹೆಚ್ಚಾಗಿ ಅಭಿವೃದ್ಧಿ ಕೆಲಸ ಮತ್ತು ಪ್ರಧಾನಿ ಮೋದಿಯವರ ಕೆಲಸಗಳು ಇಲ್ಲಿ ಜನರಿಗೆ ಮುಖ್ಯವಾಗುತ್ತದೆ. ಕಾಂಗ್ರೆಸ್‌ ಏನೂ ಕೆಲಸ ಮಾಡದೆ, ಹೇಳಿಕೊಳ್ಳಲು ಏನೂ ಸರಕಿಲ್ಲದೆ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಆದರೆ ನಾವು ರಾಷ್ಟ್ರ ಕಟ್ಟುವ ವಿಷಯಗಳ ಬಗ್ಗೆ ಮಾತಾಡುತ್ತಿದ್ದೇವೆ ಎಂದರು.

ಬಹುಗ್ರಾಮ ಕುಡಿಯುವ ನೀಡಿನ ಯೋಜನೆಯಡಿ 40 ಕೋಟಿ ರೂ. ಗೂ ಹೆಚ್ಚು ವೆಚ್ಚದಲ್ಲಿ ದಂಡಿಗಾನಹಳ್ಳಿಗೆ ನೀರು ನೀಡಲು ಕ್ರಮ ವಹಿಸಲಾಗಿದೆ. ಬಡವರಿಗೆ 98 ಎಕರೆ ಕಂದಾಯ ಜಮೀನು ಮೀಸಲಿಟ್ಟು 1,627 ಹಕ್ಕುಪತ್ರ ಹಾಗೂ ನಿವೇಶನ ಹಂಚಲಾಗಿದೆ. ಒಟ್ಟು 2,687 ನಿವೇಶನಗಳನ್ನು ರಚಿಸಲಾಗಿದೆ. ಇನ್ನೂ 1,080 ನಿವೇಶನ ನೀಡಲು ಅವಕಾಶವಿದ್ದು, ಅದನ್ನು ಕೂಡ ಮುಂದೆ ಮಾಡಲಿದ್ದೇನೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಸೋಲಾಗಿದೆ. ಆದರೆ ಈ 10 ತಿಂಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಆದರೆ ಪಿಎಂ ಫಸಲ್‌ ಬಿಮಾ ಯೋಜನೆಯಡಿ ಜರಬಂಡಹಳ್ಳಿಗೆ 3 ಕೋಟಿ ರೂ. ನೀಡಲಾಗಿದೆ. ರೈತರ ಬದುಕನ್ನು ಕಟ್ಟಿಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ.

ಹಬ್ಬದೂಟ ಸಾಕಾ, ವರ್ಷವಿಡೀ ಊಟ ಬೇಕಾ ಎಂದು ಜನರು ಚಿಂತಿಸಬೇಕು. ಉಚಿತ ಬಸ್‌ ನೀಡಿದ್ದು, ಬಸ್‌ ಇಲ್ಲದೆ ವಿದ್ಯಾರ್ಥಿಗಳು ಬೀದಿಯಲ್ಲಿ ನಿಲ್ಲುತ್ತಿದ್ದಾರೆ. ಎಲ್ಲರಿಗೂ 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿಯೂ ನೀಡುತ್ತಿಲ್ಲ. ಆದರೆ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ನಾನು ಶಾಸಕನಾಗಿ ವಸತಿ ಶಾಲೆ ನೀಡಿದ್ದೇನೆ. ಮಂಚೇನಹಳ್ಳಿಯನ್ನು ತಾಲೂಕಾಗಿಸಿದ್ದೇನೆ ಎಂದು ವಿವರಿಸಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಮಹಿಳೆಯರು ದೂರದ ಬಾವಿಯಿಂದ ನೀರು ತರುತ್ತಿದ್ದರು. ಅದಕ್ಕಾಗಿ ಜಲಜೀವನ್‌ ಮಿಷನ್‌ ನೀಡಲಾಗಿದೆ. ಕೋವಿಡ್‌ ಸಮಯದಲ್ಲಿ ಯಾವುದೇ ಕಾಂಗ್ರೆಸ್‌ ಮುಖಂಡ ಜನರ ಬಳಿ ಬಂದಿರಲಿಲ್ಲ. ಆದರೆ ಬಿಜೆಪಿ ನಾಯಕರು ಜನರಿಗೆ ನೆರವಾಗಿದ್ದರು. ನಾನು ಪ್ರತಿ ಮನೆಗೆ ಆಹಾರ ಕಿಟ್‌ಗಳನ್ನು ತಲುಪಿಸಿದ್ದೆ. ನಾನು ಶಾಸಕನಾಗಿದ್ದಾಗ 15 ಸಾವಿರ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ನೀಡಿದ್ದೆ, ಮಹಿಳಾ ಸಂಘಗಳಿಗೆ ಸಾಲಕ್ಕೆ ಅನುದಾನ ಕೊಡಿಸಿದ್ದೆ. ಆರೋಗ್ಯ ಸಚಿವನಾಗಿ ಜನರಿಗೆ ಲಸಿಕೆ ಕೊಡಿಸಿದ್ದೆ ಎಂದರು.

ಕೇಂದ್ರ ಸರ್ಕಾರ ರೈತರಿಗೆ ಕಿಸಾನ್‌ ಸಮ್ಮಾನ್‌ ನೀಡಿದರೆ, ರಾಜ್ಯದ ಪಾಲನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಉಚಿತ ವಿದ್ಯುತ್‌ ಎಂದು ಹೇಳಿದರೂ ಬಡಜನರು ಪ್ರಿಜ್‌ ಇಟ್ಟುಕೊಂಡರೆ ಅದರ ಲಾಭ ಸಿಗುವುದಿಲ್ಲ. ಪಂಪ್‌ಗೆ ವಿದ್ಯುತ್‌ ಸಂಪರ್ಕ ಬೇಕೆಂದರೆ ರೈತರು 4 ಲಕ್ಷ ರೂ. ಕೊಡಬೇಕಾಗುತ್ತದೆ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತಂದರೆ, ದ್ವೇಷದ ರಾಜಕಾರಣಕ್ಕಾಗಿ ಅದನ್ನು ಮರಳಿ ಕೋಲಾರಕ್ಕೆ ಸೇರಿಸಲಾಗಿದೆ. ನಾನು ಶಾಸಕನಾದ ಬಳಿಕ 5 ವಸತಿ ಶಾಲೆಗಳನ್ನು ನಿರ್ಮಿಸಿದ್ದೇನೆ. ನಾನು ಗಿಮಿಕ್‌ ರಾಜಕಾರಣ ಮಾಡಿಲ್ಲ ಎಂದರು.

ಒಂದು ವಸ್ತುವನ್ನು ಕಳೆದುಕೊಂಡಾಗ ಅದರ ಮಹತ್ವ ಗೊತ್ತಾಗುತ್ತದೆ. ಜನರಿಗೆ ಕಳೆದ ಒಂದು ವರ್ಷದಲ್ಲಿ ಏನು ನಷ್ಟವಾಗಿದೆ ಎಂಬುದು ಗೊತ್ತಾಗಿದೆ. ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡಬೇಕು, ಯುವಜನರಿಗೆ ಉದ್ಯೋಗ ನೀಡಲು ಕೈಗಾರಿಕೆ ಸ್ಥಾಪನೆ ಮಾಡುವ, ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಗುರಿ ಇದೆ ಎಂದರು.

*ಕೈಗಾರಿಕೆ ಆರಂಭ*

ಸಂಸದನಾದ ಬಳಿಕ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ತಂದು, ಮಂಚೇನಹಳ್ಳಿ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸುತ್ತೇನೆ ಎಂದು ಅಭ್ಯರ್ಥಿ ಡಾ.ಕೆ.ಸುಧಾಕರ್‌ ಭರವಸೆ ನೀಡಿದರು. ಈಗಾಗಲೇ 1,200 ಎಕರೆ ಜಮೀನನ್ನು ಕೈಗಾರಿಕೆಗೆ ಗುರುತಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

4 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

6 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago