ಜನರ ಬದುಕನ್ನ ಕಟ್ಟಿಕೊಡುವ ಕೆಲಸ ಮಾಡುವೆ- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್

ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.

ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.

ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮೋದಿ ಅವರು ನಿರ್ಮಿಸಿರುವ ನೂತನ ರಾಮಮಂದಿರದ ಉದ್ಘಾಟನೆಗೆ ಕಾಂಗ್ರೆಸ್ ಪಕ್ಷದ ಯಾವ ನಾಯಕರೂ ಹೋಗಲಿಲ್ಲ.

ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.

ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.

ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಹೇಗಿದ್ದರೂ 40 ಸೀಟು ದಾಟುವುದಿಲ್ಲ ಎಂದು ಗ್ಯಾರೆಂಟಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಮನಬಂದಂತೆ ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಮನೆ ಮನೆಗೂ ಬೋಗಸ್ ಗ್ಯಾರೆಂಟಿ ಕಾರ್ಡ್ ಹಂಚುವ ಮೂಲಕ ಮತದಾರರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಗುಡುಗಿದರು.

ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.

ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *