ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಸರ್ವಜ್ಞನಗರ ಶಾಸಕರೂ ಆಗಿರುವ ಸಚಿವರಾದ ಕೆ.ಜೆ.ಜಾರ್ಜ್ ಅವರು ಬುಧವಾರ ಕ್ಷೇತ್ರದ ಪ್ರಮುಖ ಜನವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ತೆರಳಿ, ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ  ಚರಂಡಿ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಇದೇ ವೇಳೆ  ರೈಲ್ವೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ, ಇದರಿಂದ ನಮ್ಮ ಕೆಲಸಗಳಿಗೆ ಅಡಚಣೆ ಆಗುತ್ತಿದೆ ಎಂದು ಜಿಬಿಎ ಅಧಿಕಾರಿಗಳು ದೂರಿದರು. ಇದಕ್ಕೆ  ಪ್ರತಿಕ್ರಿಯಿಸಿದ ಜಾರ್ಜ್, “ನೀವು ಅಧಿಕಾರಿಗಳು ಎಲ್ಲಿದ್ದರೂ ಸಂಬಳ ಬರುತ್ತದೆ. ಜನರ ಪರವಾಗಿ ಮಾನವೀಯತೆಯಿಂದ ಸ್ಪಂದಿಸಿ ಕೆಲಸ ಮಾಡಿ. ಜಿಬಿಎ ಅಧಿಕಾರಿಗಳ ಜೊತೆಗೂಡಿ ಕೆಲಸ ನಿರ್ವಹಿಸಿ,” ಎಂದು ರೈಲ್ವೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಸದ್ಯದಲ್ಲೇ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ.ಸೋಮಣ್ಣ ಅವರು ಸರ್ವಜ್ಞನಗರ ಕ್ಷೇತ್ರಕ್ಕೆ ಬರುತ್ತಾರೆ. ನಮ್ಮ ಅಧಿಕಾರಿಗಳು ಸಮಸ್ಯೆಯ ಕುರಿತು ವಿವರ ನೀಡುತ್ತಾರೆ. ರೈಲ್ವೆ ಉನ್ನತಾಧಿಕಾರಿಗಳು ಬಂದು ಉತ್ತರಿಸಿ, ಸಮಸ್ಯೆ ಬಗೆಹರಿಸಲಿ. ನಮ್ಮ ಜನರಿಗೆ ಯಾವುದೇ ಸಮಸ್ಯೆ ಆಗಬಾರದು, ನಾವು ಜನರಿಗಾಗಿ, ಜನರ ಘನತೆಯ ಬದುಕಿಗಾಗಿ ಕೆಲಸ ಮಾಡಬೇಕು ನಮ್ಮ ಧ್ಯೇಯವೂ ಅದೇ ನಮ್ಮ ಬದ್ಧತೆಯೂ ಅದೇ ಆಗಿದೆ,” ಎಂದರು.

*ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಕ್ಕೆ ಮುನ್ನುಡಿ*:

ಬಾಣಸವಾಡಿಯಲ್ಲಿ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ  ಆಡಿಟೋರಿಯಂ ನಿರ್ಮಾಣ ಹಾಗೂ ಕಾಚರಕನಹಳ್ಳಿಯ ಕೆರೆ ಆವರಣದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ದಿಗೆ ಸಚಿವ ಕೆ.ಜೆ.ಜಾರ್ಜ್ ಗುದ್ದಲಿ ಪೂಜೆ ನೆರವೇರಿಸಿದರು. ಹೆಣ್ಣೂರು 80 ಅಡಿ ರಸ್ತೆಯ ವೈಟ್‌ ಟಾಪಿಂಗ್ ಕಾಮಗಾರಿ ವೇಗವಾಗಿ ಕೈಗೊಳ್ಳುವಂತೆಯೂ ಸೂಚನೆ ನೀಡಿದರು ಹಾಗೂ ನಾಗವಾರ ನಂದ ಗೋಕುಲ ಬಡಾವಣೆ ಹಾಗೂ ಜೈಭಾರತ್ ನಗರದ ಮಾರುತಿ ಸೇವಾನಗರದಲ್ಲಿ ಮಳೆ ಚರಂಡಿಗಳ ಪರಿಶೀಲನೆ ನಡೆಸಿದರು.

ಮಂಗಳವಾರ ನಿಧನರಾದ ಮಾರುತಿ ಸೇವಾನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ದಿವಂಗತ ಕೆ.ಬಿ. ಮೋಹನ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಜಾರ್ಜ್, ಕುಟುಂಬ ಮತ್ತು ಸ್ನೇಹಿತರಿಗೆ ಸಾಂತ್ವನ ಹೇಳಿದರು. ಕೆ.ಬಿ. ಮೋಹನ್ ಅವರ ಸಾರ್ವಜನಿಕ ಸೇವೆ ಮತ್ತು ಕಾಂಗ್ರೆಸ್ ಮೌಲ್ಯಗಳಿಗೆ  ತೋರುತ್ತಿದ್ದ ಬದ್ಧತೆಗೆ ಮೆಚ್ಚಿದರು ಸದಾಕಾಲ ಮೋಹನ್ ಅವರ ಸೇವಾಕಾರ್ಯಗಳು ಜನಮಾನಸದಲ್ಲಿ ಶಾಶ್ವತವಾಗಿರಲಿದೆ ಎಂದು ತಿಳಿಸಿದರು.

ಸಚಿವರ ಕ್ಷೇತ್ರ ಪ್ರವಾಸದ ವೇಳೆ ಹೆಣ್ಣೂರು, ಬಾಣಸವಾಡಿ, ಹೆಚ್‌ಬಿಆರ್‌, ಮಾರುತಿಸೇವಾನಗರ ಕೆ.ಜಿ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹೆಚ್‌.ಎ.ಪುಲಿಕೇಶಿ, ಸಯ್ಯದ್ ಕಲೀಂ, ರಘುದೇವರಾಜ್, ಸುಮಿತ್ರಾ ಮುನಿರಾಜು, ಸಚಿವರ ವಿಶೇಷಾಧಿಕಾರಿಗಳಾದ ಸುರೇಶ್, ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಮೋಹನ್ ಮೆನನ್ ಹಾಗು ವಿವಿಧ ಮುಖಂಡರು, ಜಿಬಿಎ, ಬೆಂಗಳೂರು ಒಳಚಂಡಿ ಮತ್ತು ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳು  ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

19 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

20 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago