ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆಯಲಿರುವ ಬ್ರಹ್ಮರಥೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನವರಿ 05 ರಂದು ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
*ಡಿ.20 ರಿಂದ 30 ವರೆಗೆ ದನಗಳ ಜಾತ್ರೆ*
ಘಾಟಿ ದನಗಳ ಜಾತ್ರೆಗೆ ವಿವಿಧ ಭಾಗಗಳಿಂದ ಸಾಕಷ್ಟು ಜಾನುವಾರುಗಳು ಆಗಮಿಸಲಿದ್ದು ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳ ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಸೂಚನಾ ಫಲಕ ಅಳವಡಿಸುವ ಮೂಲಕ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸಿ ಎಂದರಲ್ಲದೆ, ಬ್ರಹ್ಮ ರಥೋತ್ಸವ ದಿನ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ. ಸಾರ್ವಜನಿಕರು ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ ತೆರಳಲು ಹಾಗೂ ಮರಳಲು ಉಚಿತ ವಾಹನ ವ್ಯವಸ್ಥೆ ಮಾಡಿ ಎಂದರು.
ಸಾರ್ವಜನಿಕರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಪೂರೈಸಿ ಹಾಗೂ ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯಗಳನ್ನು ಒದಗಿಸಿ ಎಂದು
ಘಾಟಿ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದರು.
*ಪ್ಲಾಸ್ಟಿಕ್ ಬಳಕೆ ನಿಷೇಧ*
ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ದೇವಾಲಯ ಆವರಣದಲ್ಲಿರುವ ಅಂಗಡಿ ಮಳಿಗೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಬಳಸದಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.
ದೇವಾಲಯದ ಸುತ್ತಮುತ್ತಲೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ನಗರಸಭೆಯಿಂದ ಪೌರಕಾರ್ಮಿಕರನ್ನು ನೇಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು. ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರ ಹಾಗೂ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೊಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಾತ್ರಾ ಮಹೋತ್ಸವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಘಾಟಿ ಸುಬ್ರಮಣ್ಯ ದೇವಾಲಯದ ಆಡಳಿತಾಧಿಕಾರಿ ಅಮರೇಶ ಹೆಚ್, ಜಿ. ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಡಿವೈಎಸ್ಪಿ ರವಿ, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್, ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ. ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…