ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ.
ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಬರೆದುಕೊಂಡಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…