ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿ ಯೋಜನೆಯನ್ನು (ಪಿಎಂಬಿಜೆಪಿ) ಜಾರಿಗೊಳಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರಸಭೆ ರಸ್ತೆಯಲ್ಲಿರುವ ಶ್ರೀ ರಾಮೇಗೌಡ ಸಹಕಾರ ಭವನದ ಭಾರತೀಯ ಜನ ಔಷಧಿ ಕೇಂದ್ರ ಬಳಿ ಬುಧವಾರ ಹಮ್ಮಿಕೊಂಡಿದ್ದ ಜನೌಷಧ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುತ್ತಿದೆ. ಜನೌಷಧಿಯ ದರ ಶೇ 10ರಿಂದ ಶೇ.90ರಷ್ಟು ಕಡಿಮೆಯಾಗಿದೆ. ನಮ್ಮ ನಗರದ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಗಳ ಆವರಣಗಳಿಂದ ಜನೌಷಧ ಕೇಂದ್ರಗಳನ್ನ ತೆರವು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದ ವೇಳೆ ಬಿಜೆಪಿ ಹೋರಾಟ ಮಾಡಿ ಉಳಿಸಿಕೊಂಡಿದೆ ಎಂದರು.
ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್ ಮಾತನಾಡಿ, ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್‌ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ ಎಂದರು.
“ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್, ಜನೌಷಧ ಕೇಂದ್ರದ ವೈದ್ಯೆ ಡಾ.ಸಿಂದು, ಮುಖಂಡರಾದ ವಿಜಯ್ ಕುಮಾರ್, ಗೋಪಿನಾಥ, ವೆಂಕಟರಾಜು ಮತ್ತಿತ್ತರರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…
ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…
ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…
ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ…
ದೊಡ್ಡಬಳ್ಳಾಪುರ ತಾಲೂಕಿನ ಹಮಾಮ್ ಗೇಟ್(ಶಿವಪುರ ಗೇಟ್) ಬಳಿ ಇಂದು ರಾತ್ರಿ ಸುಮಾರು 9:30ರಲ್ಲಿ ದಾರಿಯಲ್ಲಿದ್ದ ಮಹಿಳೆಗೆ ಕೋಳಿ ಸಾಗಿಸುವ ಐಷರ್…