ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗು ಇತರ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗ್ರಾಮಾಂತರ ಜಿಲ್ಲೆಯ ಪಟ್ಟಣಗಳಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸೂಚಿಸಿದರು.
ಮುಂಗಡವಾಗಿ ಖಾಸಗಿ ಕೊಳವೆ ಬಾವಿ ಗಳನ್ನು ಕಾಯ್ದಿರಿಸಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ. ಜಾನುವಾರುಗಳಿಗೆ ಮೇವಿನ ಅಭಾವ ಸೃಷ್ಟಿ ಆಗದಂತೆ ಮುಂಗಡ ಮೇವು ಸಂಗ್ರಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕಿ ಶಾಲಿನಿ, ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಜಗದೀಶ್, ರೇಷ್ಮೆ ಇಲಾಖೆ ಉಪ ನಿರ್ದೇಶಕರಾದ ಪ್ರಭಾಕರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…