ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

3 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

6 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

23 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

23 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago