ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದೊಯ್ದಿರುವ ಘಟನೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ….
ಅಪರಿಚಿತರು ಈ ಹಿಂದೆ ಕೂಡ ಹಲವು ಬಾರಿ ಜಮೀನಿಗೆ ಅತಿಕ್ರಮವಾಗಿ ಪ್ರವೇಶ ಮಾಡಿತ್ತಿದ್ದು, ಈ ಹಿನ್ನೆಲೆ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈಗ ಅದನ್ನು ಕೂಡ ಕದ್ದೊಯ್ದಿದ್ದಾರೆ….
ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಕುರಿತು ದೂರುದಾರ ಮುರುಳಿ ಟಿ.ಎನ್ ಮಾತನಾಡಿ, ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದ ಸರ್ವೆ ನಂಬರ್ 115/2 ರ ಜಮೀನಿಗೆ ಈ ಹಿಂದೆ ಹಲವು ಬಾರಿ ನಮ್ಮ ಜಮೀನಿಗೆ ಯಾರೋ ಅಪರಿಚಿತರು ಉದ್ದೇಶಪೂರ್ವಕವಾಗಿ ಅತಿಕ್ರಮವಾಗಿ ಪ್ರವೇಶ ಮಾಡುತ್ತಿದ್ದು, ನಾನು ಕೆಲವರ ಸಲಹೆಯಂತೆ ಈ ಜಮೀನಿನಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಮೇ.8 ರಂದು ಸಂಜೆ 5.30 ಗಂಟೆಯ ಸಮಯದಲ್ಲಿ ಯಾರೋ ಅಪರಿಚಿತ ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ನಮ್ಮ ಜಮೀನಿನಲ್ಲಿ ನಾನು ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಕುರಿತು ಮೇ.12 ರಂದು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…