ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…