ಜಮೀನು ವಿವಾದ: ಜಮೀನಿನಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ: ಮೂರು ದಿನಗಳಿಂದ ಅಂತ್ಯಸಂಸ್ಕಾರವಿಲ್ಲದೇ ಕೊಳೆಯುತ್ತಿರುವ ಶವ

ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.

ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ‌ ಎದುರಾಗಿತ್ತು.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಯಾದವ್, ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ತಹಸೀಲ್ದಾರರ ಮಾತಿಗೂ ಕಿವಿಗೊಡದ ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸುತ್ತೇವೆ, ಎಂದು ತಮ್ಮ ಪಟ್ಟನ್ನು ಮುಂದುವರೆಸಿದ್ದಾರೆ.

ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

4 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

5 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

18 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

18 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

19 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago