ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗರತ್ನಮ್ಮ ಪತಿ 56 ವರ್ಷದ ರಾಮಕೃಷ್ಣಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು, ಇಂದು ಬೆಳಗ್ಗೆ ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಹಾಲಿನ ಡೇರಿಯಿಂದ ಹಾಲು ತರಲು ಬಂದಿದ್ದ ವೇಳೆ ಆತನ ಅಣ್ಣನ ಮಗ ನಾಗರಾಜ್ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ತೀವ್ರ ಗಾಯಗೊಂಡ ರಾಮಕೃಷ್ಣಪ್ಪ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ನಂತರ ಆರೋಪಿ ನಾಗರಾಜ್ ಪರಾರಿಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್, ಗೌರಿಬಿದನೂರು ವೃತ್ತ ನಿರೀಕ್ಷಕ ಸತ್ಯನಾರಾಯಣ ಸೇರಿದಂತೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಎಫ್ ಎಸ್ ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.
ರಾಮಕೃಷ್ಣಪ್ಪ ಕೊಲೆಗೆ ಕುಟುಂಬಸ್ಥರು ಕಣ್ಣೀರು ಸುರಿಸಿದ್ದು ಕೊಲೆ ಆರೋಪಿ ನಾಗರಾಜ್ ಕೃತ್ಯಕ್ಕೆ ಹಿಡಿ ಶಾಪ ಹಾಕಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…