ಜಮೀನು ವ್ಯಾಜ್ಯ: ಮನೆಗೆ ನುಗ್ಗಿ ವೃದ್ಧನ ಕೊಲೆ: ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

ಜಮೀನು ವ್ಯಾಜ್ಯಕ್ಕೆ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಸಂಬಂಧಿಕನನ್ನೇ ಹತ್ಯೆ ಮಾಡಿ, ಬಳಿಕ ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೋಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀನರಸಪ್ಪ (60) ಹತ್ಯೆಗೀಡಾದವರು. ನಂದೀಶ್ ಕೊಲೆಗೈದ ಆರೋಪಿ.

ಕೊಲೆಯಾದ ಲಕ್ಷ್ಮೀನರಸಪ್ಪ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಗುತ್ತಿಗೆದಾರರಾಗಿದ್ದರು. ಲಕ್ಷ್ಮೀನರಸಪ್ಪ ಮತ್ತು ಆರೋಪಿ ನಂದೀಶ್ ಕುಟುಂಬದ ನಡುವೆ ಹಲವು ವರ್ಷಗಳಿಂದ ಜಮೀನು ಕಲಹ ಇದ್ದು, ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿತ್ತು.

ಭಾನುವಾರ ಬೆಳಗ್ಗೆ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ನಂದೀಶ್, ಲಕ್ಷ್ಮೀನರಸಪ್ಪ ಅವರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದಾಗಿ ಲಕ್ಷ್ಮೀನರಸಪ್ಪ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಲ್ಲೆ ನಡೆಯುತ್ತಿದ್ದ ವೇಳೆ ಲಕ್ಷ್ಮೀನರಸಪ್ಪ ಅವರನ್ನು ಪಾರು ಮಾಡಲು ಆತನ ಕುಟುಂಬಸ್ಥರು ಬಂದಿದ್ದಾರೆ. ಈ ವೇಳೆ ಅವರ ಮೇಲೂ ದಾಳಿ ಮಾಡಿದ್ದರಿಂದ ಅವರು ಕೂಡ ಗಾಯಗೊಂಡಿದ್ದಾರೆ ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಬಳಿಕ ಪರಾರಿಯಾಗದ ಆರೋಪಿ, ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿದ್ದಾನೆ.

ಆರೋಪಿಯನ್ನು ವಿಚಾರಣೆ ನಡೆಸಿರುವ ಪೊಲೀಸರು, ಕೊಲೆಗೆ ಜಮೀನು ವ್ಯಾಜ್ಯ ಕಾರಣವೆಂದು ತಿಳಿಸಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

3 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

15 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

17 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

19 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

20 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

21 hours ago