ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸನ್ನದ್ಧ

 

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ ಎಂದರು.

ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ನಿನ್ನೆ ಸಂಜೆಯೇ ರವಾನಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಂತ್ರಸ್ತರಾಗಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಈ ಕೂಡಲೇ ಕಾಶ್ಮೀರಕ್ಕೆ ತೆರಳುತ್ತಿದ್ದೇನೆ. ನಾನು ಮತ್ತು ನಮ್ಮ ವಿಶೇಷ ಅಧಿಕಾರಿಗಳ ತಂಡ ಸಂತ್ರಸ್ತರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲಿದ್ದೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!