ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿ: ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಹುತಾತ್ಮ: ಗಣ್ಯರಿಂದ ಸಂತಾಪ

ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ.

ಬೆಳಗ್ಗೆಯಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಾಲ್ವರು ಸೈನಿಕರಲ್ಲಿ ಇಬ್ಬರು ಸೇನಾ ಕ್ಯಾಪ್ಟನ್‌ಗಳಾಗಿದ್ದಾರೆ. 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌(28), ಮತ್ತು 9 ಪಿಎಆರ್‌ಎ ಕ್ಯಾಪ್ಟನ್‌ ಶುಭಂ ಮತ್ತು ಹವಾಲ್ದಾರ್‌ ಮಜೀದ್‌ ಮೃತಪಟ್ಟವರು.

ಸಿಎಂ ಸಿದ್ದರಾಮಯ್ಯನವರಿಂದ ಸಂತಾಪ

ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿರುವ ಸುದ್ದಿ ಅತ್ಯಂತ ದುಃಖಕರ. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಹುತಾತ್ಮ ಸೈನಿಕರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗಕ್ಕೆ ದೇವರು ಕರುಣಿಸಲಿ. ಮೃತ ಯೋಧರ ಅನನ್ಯ ದೇಶಭಕ್ತಿ, ತ್ಯಾಗ, ಬಲಿದಾನವನ್ನು ನಾಡು ಚಿರಕಾಲ ಸ್ಮರಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ‌ಯವರಿಂದ ಸಂತಾಪ

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್  ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ‌ ಸಂತಾಪ ಸೂಚಿಸಿದ್ದಾರೆ.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

7 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

18 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

19 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

20 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

20 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

23 hours ago