ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (NC) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು J&K ನ ನೂತನ ಮುಖ್ಯಮಂತ್ರಿಯಾಗಿ ಮತ್ತು ಜಮ್ಮು ಪ್ರದೇಶದ ಪ್ರಮುಖರ ಮುಖಂಡರಾದ ಸುರೀಂದರ್ ಕುಮಾರ್ ಚೌಧರಿ ಅವರು ಉಪ ಮುಖ್ಯಮಂತ್ರಿಯಾಗಿ (DCM) ಪ್ರಮಾಣ ವಚನ ಸ್ವೀಕರಿಸಿದರು.
ಸತೀಶ್ ಶರ್ಮಾ, ಸಕಿನಾ ಯಾತೂ, ಜಾವಿದ್ ದಾರ್, ಸುರೀಂದರ್ ಕುಮಾರ್ ಚೌಧರಿ ಮತ್ತು ಜಾವಿದ್ ರಾಣಾ ಸೇರಿದಂತೆ ಒಟ್ಟು ಐದು ಶಾಸಕರು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (SKICC) ಪ್ರಮಾಣ ವಚನ ಸ್ವೀಕರಿಸಿದರು.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಒಟ್ಟು 90 ಸ್ಥಾನಗಳಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದಿದ್ದರೆ, ಕಾಂಗ್ರೆಸ್ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.