ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ, ಪಿಡಿಪಿ ಮುಖ್ಯಸ್ಥೆಯಾಗಿರುವ ಮೆಹಬೂಬಾ ಮುಫ್ತಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಮೆಹಬೂಬಾ ಮುಫ್ತಿ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ.
ಬೆಂಕಿ ಘಟನೆಯ ಸಂತ್ರಸ್ತರನ್ನು ಭೇಟಿ ಮಾಡಲು ಖಾನಬಾಲ್‌ಗೆ ತೆರಳಿ, ನಿಗದಿಯಾಗಿದ್ದ ಮುಂದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಮತ್ತೊಂದು ಕಾರಿಗೆ ಆಕಸ್ಮಿಕವಾಗಿ ಡಿಕ್ಕಿಯಾಗಿದೆ.
ಈ ಪರಿಣಾಮ ಕಾರಿನಲ್ಲಿದ್ದ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.