ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ತಾತ್ಕಾಲಿಕ ಹುದ್ದೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಎಂ.ಐ.ಎಸ್ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ ರೂ. 25000 ದಿಂದ ರೂ. 30000 ನೀಡಲಾಗುವುದು.
ಅರ್ಹತೆಗಳು:
ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದ ಮೂಲಕ ಪದವಿ/ ಸ್ನಾತಕೋತ್ತರ ಪದವಿಯಾದ ಅಂಕಿ ಅಂಶ (Statistics) ಮತ್ತು ಗಣಕ ಯಂತ್ರ ವಿಜ್ಞಾನದ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಕನಿಷ್ಠ 3 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು. ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುವುದು. ವಯೋಮಿತಿ 45 ವರ್ಷಗಳು ಮೀರಿರಬಾರದು.
2023ರ ಜುಲೈ 20 ರೊಳಗೆ ಇ-ಮೇಲ್ ಅಥವಾ ಕಾರ್ಯಪಾಲಕ ಇಂಜಿನಿಯರ್ ರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು(ಬೀರಸ್ಂದ್ರ), ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಇಲ್ಲಿಗೆ ಖುದ್ದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…