ಜಲ್ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂ.ಐ.ಎಸ್ ಸಮಾಲೋಚಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ತಾತ್ಕಾಲಿಕ ಹುದ್ದೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಎಂ.ಐ.ಎಸ್ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ರೂ. 25000 ದಿಂದ ರೂ. 30000 ನೀಡಲಾಗುವುದು.

ಅರ್ಹತೆಗಳು:

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದ ಮೂಲಕ ಪದವಿ/ ಸ್ನಾತಕೋತ್ತರ ಪದವಿಯಾದ ಅಂಕಿ ಅಂಶ (Statistics) ಮತ್ತು ಗಣಕ ಯಂತ್ರ ವಿಜ್ಞಾನದ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಕನಿಷ್ಠ 3 ವರ್ಷ ಕೆಲಸ ನಿರ್ವಹಿಸಿದ ಅನುಭವವಿರಬೇಕು. ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುವುದು‌. ವಯೋಮಿತಿ 45 ವರ್ಷಗಳು ಮೀರಿರಬಾರದು.

2023ರ ಜುಲೈ 20 ರೊಳಗೆ ಇ-ಮೇಲ್ ಅಥವಾ ಕಾರ್ಯಪಾಲಕ ಇಂಜಿನಿಯರ್ ರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು(ಬೀರಸ್ಂದ್ರ), ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಇಲ್ಲಿಗೆ ಖುದ್ದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

1 hour ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

4 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

15 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

22 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago