ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ನಾಮಫಲಕ ಅನಾವರಣ ಮಾಡುವ, ಯೋಜನೆಗೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಜಲ ಮೂಲಗಳು ಸಾಮಾಜಿಕ ಜನಜೀವನದ ಮೇಲೆ ಪರಿಣಾಮ ಬೀರಲಿದ್ದು, ಕೆರೆ-ಕುಂಟೆ ಮೊದಲಾದ ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆಯಾಗಿದೆ ಎಂದರು.

ಕೆರೆಗಳನ್ನು ಪುನಶ್ವೇತನಗೊಳಿಸುವ ಕಾಮಗಾರಿಗಳಿಗೆ ಸರ್ಕಾರದೊಂದಿಗೆ ಸಮುದಾಯ ಸಹ ಕೈಜೋಡಿಸಬೇಕಿದೆ. 1982ರಲ್ಲಿ ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ರಾಜ್ಯದಲ್ಲಿ 914 ಕೆರೆಗಳ ಪುನಶ್ವೇತನಗೊಳಿಸಿರುವ ಪರಿಣಾಮ ಅಂತರ್ಜಲ ವೃದ್ಧಿಯಾಗುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಅಂತರ್ಜಲ ಹೆಚ್ಚಿ ಕೊಳವೆ ಬಾವಿಗಳಲ್ಲಿ ನೀರು ತುಂಬುತ್ತದೆ. 1000 ಅಡಿಗೆ ಇಳಿದಿದ್ದ ಅಂತರ್ಜಲ ಈಗ 300 ರಿಂದ 400 ಅಡಿಗಳಿಗೆ ಬರುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಗ್ರಾಮದಲ್ಲಿ ನೀರಾವರಿ ಅಭಿವೃದ್ದಿಯಾಗಲಿದ್ದು, ಕೆರೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದರು.

ರೈತರಿಗೆ ಅನುಕೂಲವಾಗುವ ಹೈನುಗಾರಿಕೆ ಹಾಗೂ ಪುಷ್ಪೋದ್ಯಮಕ್ಕೆ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆರವು ನೀಡಲಾಗುತ್ತಿದೆ. ರಾಜ್ಯದ ಬೀದ‌ರ್ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೆರವು ನೀಡಿದ ಪರಿಣಾಮ 11 ಸಾವಿರ ಲೀ. ಇದ್ದ ಹಾಲಿನ ಉತ್ಪಾದನೆ ಈಗ 1.6 ಲಕ್ಷ ಆಗಿದೆ ಎಂದರು.

ಹಳೆಯ ಹಾಗೂ ಪುರಾತನ ದೇವಾಲಯಗಳನ್ನು ಸಂರಕ್ಷಿಸಿಕೊಳ್ಳುವ ಕಾರ್ಯವಾಗುತ್ತಿದ್ದು, ಭೂಗರ್ಭಹುದುಗಿರುವ ದೇವಾಲಯಗಳನ್ನು ಸಹ ಸಂರಕ್ಷಿಸಲಾಗುತ್ತಿದೆ. ಊರುಗಳಲ್ಲಿ ಭಕ್ತರಿದ್ದರೂ ದೇವರೇ ಅನಾಥರಾಗುತ್ತಿದ್ದಾರೆ. ಈ ದಿಸೆಯಲ್ಲಿ ದೇವಾಲಯದ ಜೀರ್ಣೋದ್ದಾರಕ್ಕೆ ಮುಂದಾಗಿದೆ ಎಂದರು.

ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ರಾಜಘಟ್ಟ ಗ್ರಾಮ ಇತಿಹಾಸ ಪ್ರಸಿದ್ಧವಾದ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಕೆರೆ ಹೂಳೆತ್ತಿ ಇದರ ಹಸ್ತಾಂತರ ಕಾರ್ಯಕ್ರಮಕ್ಕೆ ವೀರೇಂದ್ರ ಹೆಗ್ಗಡೆಯವರು ಆಗಮಿಸಿರುವುದು ನಮ್ಮ ಗ್ರಾಮಕ್ಕೂ ಹಾಗೂ ತಾಲೂಕಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅಮಿತ್, ಕೆರೆ ಸಮಿತಿಯ ಅಧ್ಯಕ್ಷ ಆನಂದ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿರಾಜು, ಪ್ರಾದೇಶಿಕ ನಿರ್ದೇಶಶ್ ಶೀನಪ್ಪ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಊರಿನ ಗ್ರಾಮಸ್ಥರು, ಸಂಘ-ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

4 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

8 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

11 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

22 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago