ಜವರಾಯನ ಅಟ್ಟಹಾಸ.. ಮೂವರು ಸ್ನೇಹತರು ಅಪಘಾತದಲ್ಲಿ ದುರ್ಮರಣ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ದಿಕ್ಕಿನಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​​ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!