ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ದಿಕ್ಕಿನಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್‌ಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…