ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್‌ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…