ಜವಾಹರ ನವೋದಯ ವಿದ್ಯಾಲಯ ಪ್ರವೇಶಾತಿ ಬಗ್ಗೆ ಸರ್ಕಾರಿ ಶಾಲಾ ಮಕ್ಕಳಿಗೆ ಜಾಗೃತಿ

ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.

ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.

ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮೇಶ್ ನವೋದಯ ಮಾತನಾಡಿ ಸರ್ಕಾರಿ ಶಾಲೆ ಮಕ್ಕಳಲ್ಲಿ ಈ ಒಂದು ಜಾಗೃತಿ ಅಭಿಯಾನ ರಾಜ್ಯಾದ್ಯಂತ ಮಾಡುತ್ತ ಬಂದಿದ್ದು ಹಳೆಯ ವಿದ್ಯಾರ್ಥಿಗಳು ಹಾಗು ಸ್ವಯಂ ಸೇವಕರು ಮುಂದೆ ಬಂದಲ್ಲಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಕೋಚಿಂಗ್ ನೀಡಿ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಪ್ರವೇಶ ಪರೀಕ್ಷೆಯಲಿ ಭಾಗವಹಿಸಿ ಆಯ್ಕೆ ಆಗುವಂತೆ ಮಾಡಲು ಈ ಕಾರ್ಯಕ್ರಮ ಅನುಕೂಲವಾಗುತ್ತದೆ ಎಂದರು.

ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.

ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.

ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್‌ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

4 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

6 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

8 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago