ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…