ಜಾತಿಗಣತಿಗೆ ಸಹಕರಿಸುವಂತೆ ಮನವಿ : ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ

ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು,  ಸಮೀಕ್ಷೆಗೆ ಬರುವ ಗಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ಮಾಜಿ ಶಾಸಕ ಟಿ ವೆಂಕಟರಮಣಯ್ಯ ಮನವಿ ಮಾಡಿದರು.

ನಗರದ ಒಕ್ಕಲಿಗರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ 2013-14ರಲ್ಲಿ ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳ ಸಮೀಕ್ಷೆ ನಡೆಸಿತ್ತು. ಆದರೆ, ಹಲವು ಸಮುದಾಯದ ಮುಖಂಡರು, ಪ್ರಮುಖರು ಸಮೀಕ್ಷೆಯನ್ನು ಮತ್ತೊಮ್ಮೆ ಸೂಕ್ತ ರೀತಿಯಲ್ಲಿ ಮಾಡಬೇಕು ಎಂದು ಮನವಿ ಮಾಡಿದ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಸಮೀಕ್ಷೆಗೆ ಮುಂದಾಗಿದೆ. ಸಮೀಕ್ಷೆಗೆ ಸಹಕಾರಿಯಾಗುವ ಅರ್ಜಿಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಮನೆ ತಲುಪಿಸಲಿದ್ದಾರೆ. ಇದೇ ತಿಂಗಳ 22ರಿಂದ ಸಮೀಕ್ಷೆ ಆರಂಭವಾಗಲಿದ್ದು, ಮಾಹಿತಿ ಪಡೆಯಲು ಮನೆ ಬಾಗಿಲಿಗೆ ಶಿಕ್ಷಕರು ಬರಲಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಮುಖ್ಯಸ್ಥರು ಹಾಜರಿದ್ದು ಸೂಕ್ತ ಮಾಹಿತಿಯನ್ನು ಶಿಕ್ಷಕರಿಗೆ ಕೊಡುವ ಮೂಲಕ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ

ನಂತರ ಒಕ್ಕಲಿಗ ಮುಖಂಡರಾದ  ನಾಗೇಶ್ ಮಾತನಾಡಿ, ರಾಜ್ಯ ಸರ್ಕಾರ ನಡೆಸಲಿರುವ ಸಮೀಕ್ಷೆಯಲ್ಲಿ  ಸಮುದಾಯದ ಜನತೆ ಭಾಗವಹಿಸುವಿಕೆ ಹಾಗೂ  ಮಾಹಿತಿ ನೀಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಸೋಮವಾರ (ಸೆ. 15)ದಂದು ಆದಿಚುಂಚನಗಿರಿ ಮಹಾಸ್ವಾಮಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಒಕ್ಕಲಿಗರ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ತಾಲೂಕಿನ  ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿದ್ದು, ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕೇಳಲಾಗುತ್ತದೆ. ಒಕ್ಕಲಿಗ ಸಮುದಾಯದ ಹೆಸರನ್ನು ಸರಿಯಾಗಿ ನಮೂದಿಸಬೇಕು. ಸಮುದಾಯ ಬಂಧುಗಳು ಸೂಕ್ತ ರೀತಿಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ  ತಾಲೂಕಿನಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿದ್ದ ಬೈರೇಗೌಡ, ಶಶಿಧರ್ ಮೊದಲಾದ ಮುಖಂಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಪಿ.ದಯಾನಂದ್, ವೆಂಕಟೇಶ್ ಬಾಬು, ಕೆ.ಪಿ.ಜಗನ್ನಾಥ್, ಬಿ.ಜಿ.ಹೇಮಂತರಾಜು, ವೆಂಕಟೇಶ್ (ಅಪ್ಪಿ), ವಿಶ್ವಾಸ್ ಹನುಮಂತೇಗೌಡ, ನಾಗೇಶ್, ರೇವತಿ ಅನಂತರಾಮು, ಡಿ.ಸಿ.ಶಶಿಧರ್, ಶರತ್ ಪಟೇಲ್, ಶಾಂತಮ್ಮ  ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

13 minutes ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

2 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

2 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

7 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

9 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

22 hours ago