ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ಹೇಳಿಕೆಗೆ ನನ್ನ ವಿರೋಧವಿದೆ- ಸಿಎಂ‌ ಸಿದ್ದರಾಮಯ್ಯ

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ರೋಗ ಪತ್ತೆಹಚ್ಚಿದ ಮೇಲಲ್ಲವೇ ಔಷಧಿ ನೀಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಯವಾದಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹೋದರೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅದನ್ನು ಸ್ವೀಕರಿಸಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್‌ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.

ಅತಿ ಹಿಂದುಳಿದವರಿಗೆ ಪ್ರತ್ಯೇಕ ಗುಂಪು ಬೇಕು ಎಂಬ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *