ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ರೋಗ ಪತ್ತೆಹಚ್ಚಿದ ಮೇಲಲ್ಲವೇ ಔಷಧಿ ನೀಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯವಾದಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹೋದರೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅದನ್ನು ಸ್ವೀಕರಿಸಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್‌ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಅತಿ ಹಿಂದುಳಿದವರಿಗೆ ಪ್ರತ್ಯೇಕ ಗುಂಪು ಬೇಕು ಎಂಬ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…