ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವುದೇ ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು

ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ.‌ ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ತಿಳಿಸಿದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

2 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago