ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು
ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ತಿಳಿಸಿದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…