ಜಾತಿ ವ್ಯವಸ್ಥೆಯಲ್ಲಿ ಚಲನೆಯಿಲ್ಲ- ಆರ್ಥಿಕ  ಹಾಗೂ ಸಾಮಾಜಿಕ ಚಲನೆಯಿಲ್ಲದ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ- ಇದಕ್ಕಾಗಿ ಶಿಕ್ಷಣ ಬಹಳ ಮುಖ್ಯ- ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಶತಮಾನಗಳ ಕಾಲ  ಹಿಂದುಳಿದ, ಶೂದ್ರ ವರ್ಗ ಶಿಕ್ಷಣ ಸಂಸ್ಕೃತಿಯಿಂದ ವಂಚಿತವಾಗಿತ್ತು. ಜಾತಿ ವ್ಯವಸ್ಥೆಯಲ್ಲಿ ಚಲನೆಯಿಲ್ಲ. ಆರ್ಥಿಕ  ಹಾಗೂ ಸಾಮಾಜಿಕ ಚಲನೆಯಿಲ್ಲದ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ. ಇದಕ್ಕಾಗಿ ಶಿಕ್ಷಣ ಬಹಳ ಮುಖ್ಯ. ನಾರಾಯಣ ಗುರುಗಳು ಶಿಕ್ಷಣಕ್ಕೆ ಒತ್ತು ನೀಡಿದ್ದರು. ಶಿಕ್ಷಣದಿಂದ ತುಳಿತಕ್ಕೊಳಗಾದವರು ಸ್ವಾಭಿಮಾನಿ, ಸಶಕ್ತರಾಗಿ ಜೀವನ ನಡೆಸಲು ಸಾಧ್ಯ. ಆದರೆ   ವೈಚಾರಿಕ ಚಿಂತನೆಯ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಎಲ್ಲ ಮಹನೀಯರ ಆಶಯದಂತೆ ಸಮಾಜದಲ್ಲಿ ಸಮಾನತೆ ಬರಬೇಕು. ಶಿಕ್ಷಣದ ಮೂಲಕ ಆರ್ಥಿಕ, ಸಾಮಾಜಿಕ ಬದಲಾವಣೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಿತ್ತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದರು.

ಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ ಈಡಿಗ ಸಮಾಜಕ್ಕೆ ಏನು ಅಗತ್ಯ ಎಂದು ಪ್ರಸ್ತಾಪ ಮಾಡಿದ್ದಾರೆ. ಅನೇಕ ಒತ್ತಾಯ – ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು‌.

1995 ರಲ್ಲಿ ನಾನು ಹಣಕಾಸಿನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಸಮಾವೇಶ ನಡೆದಿತ್ತು. ಅಂದು ಕೂಡ ಅರ್ಥಪೂರ್ಣವಾಗಿ ಆಚರಿಸಿದ್ದರು. ಅಂದಿನ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗವಹಿಸಿದ್ದರು. ಅಂದೂ ಕೂಡ ಬೇಡಿಕೆಗಳನ್ನು ಈಡೇರಿಸಲಾಗಿತ್ತು ಎಂದರು.

ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರ ಮಾಡಬೇಕೆಂದು ಒತ್ತಾಯ ಮಾಡಿದ್ದ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸುವಂತೆ ತೀರ್ಮಾನ ಮಾಡಲಾಯಿತು. ನಾರಾಯಣ ಗುರುಗಳ ಮಾರ್ಗದರ್ಶನ ಅವಶ್ಯ , ಅವರ ವಿಚಾರಗಳು, ಇಂದಿಗೂ, ಎಂದೆಂದಿಗೂ ಪ್ರಸ್ತುತ. ಕೇರಳದಲ್ಲಿ ಅವಮಾನಗಳನ್ನು ಸಹಿಸಿ ಅದರ ವಿರುದ್ಧ ಸಾತ್ವಿಕ ಕೋಪವಿದ್ದರೂ ಸಹಿಸಿ ಜನರ ಸಂಘಟನೆ ಮಾಡಿ, ಜಾಗೃತಿ ಮೂಡಿಸಲು, ಬದಲಾವಣೆ ತರಲು ಇಡೀ ಬದುಕನ್ನು ಮುಡಿ ಪಾಗಿಟ್ಟರು. ಆರ್ಥಿಕವಾಗಿ, ಸಾಮಾಜಿಕವಾಗಿ ವಂಚಿತರಾಗಿರುವ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದರು. ಮನುಷ್ಯರೆಲ್ಲರೂ ಒಂದೇ, ಜಾತಿ, ಒಂದೇ ಮತ, ಒಂದೇ ದೇವರು ಎಂದು ಹೇಳಿದ್ದರು. ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಮಾಡಿಕೊಂಡಿರುವವರು ನಾವು. ಜಾತಿ ಹೇಳಬೇಡ, ಜಾತಿ ಕೇಳಬೇಡಿ ಹಾಗೂ ಜಾತಿ ನೋಡಬೇಡ ಎಂದು ನಾರಾಯಣ ಗುರುಗಳು ಹೇಳಿದ್ದರು ಎಂದರು.

ದೇವಸ್ಥಾನದೊಳಗೆ ದೇವರ ದರ್ಶನ ಮಾಡಲು ಶೂದ್ರರಿಗೆ ಅವಕಾಶವಿರಲಿಲ್ಲ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ದೇವರು ಯಾರ ಸ್ವತ್ತಲ್ಲ. ಹಾಗಾಗಿ ನೀವೇ ದೇವಸ್ಥಾನಗಳನ್ನು ಕಟ್ಟಿ ಎಂದು ಕರೆ ನೀಡಿದ್ದರು. ಕೇರಳ, ಕರಾವಳಿಯಲ್ಲಿ ಅನೇಕ ದೇವಸ್ಥಾನ ಕಟ್ಟಿದ್ದರು. ಈಡಿಗರು, ಬಿಲ್ಲವರೇ ಈ ದೇವಾಲಯದ ಪೂಜಾರಿಗಳಾದರು. ಕುವೆಂಪು ಹೇಳಿದಂತೆ  ಹುಟ್ಟುವಾಗ ವಿಶ್ವಮಾನವರಾಗಿರುವ ಮನುಷ್ಯರು ನಂತರ ಅಲ್ಪಮಾನವರಾಗುತ್ತಾರೆ. ವಿಶ್ವಮಾನವನಾಗುವ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ನಾರಾಯಣ ಗುರುಗಳು ವಿಶ್ವ ಮಾನವರಾಗಿದ್ದರು. ಜಾತಿ, ಧರ್ಮಗಳನ್ನು ಮೀರಿ ಬೆಳೆದವರ ಪರಂಪರೆಯಲ್ಲಿ ಕನಕದಾಸರು, ಬುದ್ಧ, ಬಸವ, ಅಂಬೇಡ್ಕರ್, ನಾರಾಯಣ ಗುರುಗಳು ಸೇರುತ್ತಾರೆ. ಮಾನವ ಸಮಾಜ ನಿರ್ಮಾಣವಾಗಬೇಕೆಂಬ ಕನಸು ಕಂಡಿದ್ದರು. ಮಾನವರು ಒಂದೇ ಜಾತಿ ಎಂದು ಸಾರಿದ್ದರು. ದಯೆಯೇ ಧರ್ಮದ ಮೂಲ ಎಂದರು. ಈ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು. ಅಂಬೇಡ್ಕರ್ ಅವರು ಹೇಳುವಂತೆ ಶಿಕ್ಷಣ, ಸಂಘಟನೆ, ಹೋರಾಟವನ್ನು ಅವಕಾಶ ವಂಚಿತರು ಮಾಡಬೇಕು ಎಂದು ಹೇಳಿದರು.

1856 ರಲ್ಲಿ ಹುಟ್ಟಿದ ನಾರಾಯಣ ಗುರುಗಳು ಸಣ್ಣ ವಯಸ್ಸಿನಲ್ಲಿ ಅನೇಕ ಅವಮಾನಗಳನ್ನು ಅನುಭವಿಸಿ, ಸಮಾಜದ ಸುಧಾರಣೆಗಾಗಿ ಸಮಾಜದ ಪರಿವರ್ತಕರಾದರು. ಸಮಾಜದಲ್ಲಿನ ಅಸಮಾನತೆಯಿಂದ ನೊಂದ ಜನ ಪ್ರಜಾಪ್ರಭುತ್ವದ ಸೌಧವನ್ನು ನಾಶ ಮಾಡುವ ಸಾಧ್ಯತೆಯಿದೆಯೆಂದು ಡಾ.ಅಂಬೇಡ್ಕರ್ ಅವರು ಎಚ್ಚರಿಕೆ ನೀಡಿದ್ದರು. ಸಮಾಜದಲ್ಲಿ ಬದಲಾವಣೆ ತರಲು ಸರ್ಕಾರ ಪ್ರಯತ್ನಿಸುವ ಹಾದಿಯಲ್ಲಿದೆ ಎಂದರು.

ದೊಡ್ಡ ಇತಿಹಾಸವಿರುವ ಈಡಿಗ ಸಮುದಾಯ ಹೆಮ್ಮೆ ಪಡಬೇಕು. ಸಮುದಾಯದವರು ಸಮಾಜ ಸುಧಾರಕರು ನುಡಿದ ದಾರಿಯಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಸಂಘಟನೆ ಬಹಳ ಮುಖ್ಯ. ಸಂವಿಧಾನ ನೀಡಿದ ಹಕ್ಕುಗಳನ್ನು ಪಡೆದುಕೊಳ್ಳಲು ಜಾಗೃತರಾಗಬೇಕು. ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಚಿಂತನೆ ನಡೆಸಲು ಇಂತಹ ಸಮಾವೇಶಗಳು ಅತ್ಯವಶ್ಯ. ಸಮಾಜದಿಂದಾಗಿ ಏಳಿಗೆ ಹೊಂದಿದವರು ಸಮಾಜದ ಋಣವನ್ನು ತೀರಿಸಬೇಕು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

14 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

20 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

24 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 days ago