ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ- ಸಿಎಂ ಸಿದ್ದರಾಮಯ್ಯ

ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ವಿದ್ಯಾವಂತರು ಮಾನವೀಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ಅವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದು ತಿಳಿಸಿದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾII ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು. ಇಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದುದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು.

ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ, ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

7 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago