Categories: ಕೋಲಾರ

ಜಾನಪದ ಕಲೆಗೆ ಪೋತ್ಸಾಹ ಅಗತ್ಯವಿದೆ- ವಿ.ಮನೋಹರ್

ಕೋಲಾರ: ಪ್ರಸ್ತುತ ಸನ್ನಿವೇಶದಲ್ಲಿ ಜಾನಪದ ಕಲೆಯು ಅಳಿವಿನಂಚಿನಲ್ಲಿದೆ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಯುವ ಸಮೂಹದ ಮೇಲೆ ಇದ್ದು ಕಲೆಗೆ ಹೆಚ್ಚಿನ ಪೋತ್ಸಾಹವು ಅಗತ್ಯವಿದೆ ಎಂದು ಸಂಗೀತಾ ನಿರ್ದೇಶಕ ಹಾಗೂ ಸಾಹಿತಿ ವಿ.ಮಹೋಹರ್ ತಿಳಿಸಿದರು.

ನಗರದ ಸಿ.ಬೈರೇಗೌಡ ನಗರದ ಮೈದಾನದಲ್ಲಿ ಭಾನುವಾರ ರಾತ್ರಿ ಜಗ್ಗಣ್ಣಕ್ಕ ಸಂಗೀತಾ ಸುಗ್ಗಿಯ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ನಮ್ಮ ಪೂರ್ವಜರು ನಡೆಸಿಕೊಂಡು ಬರತ್ತಿದ್ದ ಕಲೆಗಳು ಜಾಗತೀಕರಣ ಪ್ರಭಾವದಿಂದ ದೂರ ಸರಿಯುತ್ತಿವೆ ಇಂದಿನ ಮಕ್ಕಳಿಗೆ ಜಾನಪದ ಕಲೆಗಳ ಬಗ್ಗೆ ತಿಳಿಸಿಕೊಟ್ಟು ಜಾನಪದ ಸಾಹಿತ್ಯವನ್ನು ಮತ್ತು ಕಲೆಯನ್ನು ಉಳಿಸುವ ಪ್ರಯತ್ನಗಳು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಹಾಗೂ ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಮಾತನಾಡಿ,  ದೇಶೀಯ ಕಲೆಯನ್ನು ಪರಿಚಯಿಸುವ ಪ್ರಯತ್ನವಾಗಿದ್ದು ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಸಾಂಸ್ಕೃತಿಕ ಕಲೆ, ಸಂಸ್ಕೃತಿ ಉಳಿಸಿ, ಬೆಳೆಸಲು ಉತ್ತೇಜಿಸಬೇಕು ಶಿಕ್ಷಣ, ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯ ಜೊತೆಗೆ ನಮ್ಮ ಸಂಸ್ಕೃತಿಯೊಂದಿಗೆ ಭಾಷೆಯನ್ನು ಉಳಿಸುವುದು ಮುಖ್ಯವಾಗಿದೆ ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಕವಾಗಿರುತ್ತದೆ, ಅದನ್ನು ಗುರುತಿಸಿ, ಪ್ರೋತ್ಸಾಹಿಸಿದಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮತ್ತು ಯುವಕರಲ್ಲಿನ ಪ್ರತಿಭೆ ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಿವೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕ ಹಾಗೂ ಜಾನಪದ ಗಾಯಕ ಗೋ.ನಾ ಸ್ವಾಮಿ ಮಾತನಾಡಿ, ಸಿನಿಮಾದ ಮಾಯಾಲೋಕದಲ್ಲಿ ದೇಶೀಯ ಜಾನಪದ ಕಲೆಗಳು ದೂರವಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಮೈಕ್ ಮುಟ್ಟದ ಕಲಾವಿದರನ್ನು ಗುರುತಿಸಿ ಬೆಳೆಸುವ ಉದ್ದೇಶವಾಗಿದೆ ಸ್ಥಳೀಯವಾದ ಕಲೆ ಸಂಸ್ಕೃತಿಗೆ ಚಪ್ಪಾಳೆ ಹೊಡೆದು ಅವರಿಗೂ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮುಂದಿನ ವರ್ಷ ಜನವರಿಯಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ 20 ಲಕ್ಷ ಮೊತ್ತದ ವಿಶ್ವ ಕನ್ನಡ ಜಾನಪದ ಗಾಯನ ಸ್ಪರ್ಧೆಯ ಲಾಂಛನ ಬಿಡುಗಡೆಗೊಳಿಸಿದರು.

ಜಗ್ಗಣ್ಣಕ್ಕ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ಧೆಗಳಿಗೆ ಬಹುಮಾನಗಳನ್ನು ವಿತರಿಸಿದರು ವೇದಿಕೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು, ಜಾನಪದ ಒಕ್ಕೂಟದ ಅಧ್ಯಕ್ಷ ನಾಗರಾಜ್, ನಿರ್ಮಿತಿ ಕೇಂದ್ರದ ನಾರಾಯಣಗೌಡ, ಶಿಕ್ಷಣ ಇಲಾಖೆಯ ಅಶೋಕ್, ರೇಷ್ಮೆ ಇಲಾಖೆಯ ಬೈರೇಗೌಡ, ನಿರೂಪಕಿ ಅಕ್ಷಿತಾ ಮುಂತಾದವರು ಇದ್ದರು.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

36 minutes ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

47 minutes ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

2 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

3 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

5 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

13 hours ago