Categories: ತುಮಕೂರು

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

 


*ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಯೋಜನೆಯಡಿ ತಾಲ್ಲೂಕಿನಾದ್ಯಂತ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅರ್ಹರು ಸರ್ಕಾರ ಉತ್ತಮ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವುದು ಈ ಯೋಜನೆಯ ಸಾರ್ಥಕತೆಗೆ ಆಧಾರವಾಗಿರುತ್ತದೆ. ಎಲ್ಲರೂ ಯೋಜನೆಯ ಸೌಲಭ್ಯಗಳನ್ನು ಬಳಸಿಕೊಳ್ಳಿ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಮನವಿ ಮಾಡಿದರು.

ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡೇನಹಳ್ಳಿ ಗ್ರಾಮದ ಶನೇಶ್ವರ ದೇವಾಲಯದ ಹತ್ತಿರ ಐಇಸಿ ಚಟುವಟಿಕೆಯಡಿ ಸದರಿ ಯೋಜನೆಗೆ ಸಂಬಂಧಿಸಿದ ಬೀದಿ ನಾಟಕ ಹಾಗೂ ಜಾಬ್ ಕಾರ್ಡ್ ಮೇಳಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವರಾಜಯ್ಯ ಅವರು ಮಾತನಾಡಿ, ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರು ಯೋಜನೆಯಡಿ ದೊರಕುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.

ಸಹಾಯಕ ನಿರ್ದೇಶಕರಾದ ಇಂದ್ರೇಶ್ ರವರು ಮಾತನಾಡಿ, ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಜಾಬ್ ಕಾರ್ಡ್ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪಡಿತರ ಚೀಟಿ ಸಲ್ಲಿಸಿ ಹೊಸದಾಗಿ ಉದ್ಯೋಗ ಚೀಟಿ ಪಡೆಯಬಹುದು ಎಂದು ತಿಳಿಸಿದರು.

ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ಪ್ರಧಾನ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು ಎಂದರು. ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಲ್ಲರೂ ಸೌಲಭ್ಯಗಳನ್ನು ತೆಗೆದುಕೊಳ್ಳಿ ಎಂದು ರೈತರಿಗೆ ಹೇಳಿದರು.

ತದನಂತರ, ತುಮಕೂರಿನ ನುರಿತ ಕಲಾವಿದರ ತಂಡವನ್ನು ಕರೆಸುವ ಮೂಲಕ ಯೋಜನೆಯ ಸಂಪೂರ್ಣ ಮಾಹಿತಿಯನ್ನೊಳ್ಳಗೊಂಡ ಜಾಗೃತಿ ಗೀತೆಗಳು ಹಾಗೂ ಸರಿಸುಮಾರು ಒಂದು ಗಂಟೆಯ ನಾಟಕ ಪ್ರದರ್ಶನವನ್ನು ಮಾಡಲಾಯಿತು.

ಈ ವೇಳೆ ಕೃಷಿ ಇಲಾಖಾ ಸಹಾಯಕ ನಿರ್ದೇಶಕರಾದ ಶಿವರಾಜ್ ರವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಭೈರಪ್ಪ ಹಾಗೂ ನಾಗೇಶ್ ರವರು, ವ್ಯವಸ್ಥಾಪಕರಾದ ಬಸವರಾಜು ರವರು, ವಿಬಿ – ಜಿ ರಾಮ್ ಜಿ ಯೋಜನೆಯ ಎಲ್ಲಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಕೂಲಿಕಾರರು, ಬೀದಿ ನಾಟಕ ತಂಡ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

21 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

21 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

4 days ago