ಜಾರಿ ನಿರ್ದೇಶನಾಲಯದ ಅಧಿಕಾರ ದುರುಪಯೋಗ ಆರೋಪ: ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಧರಣಿ

ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಆದರೆ, ಅವರು ಹೇಳಿರುವುದು ಒನ್ ಸೈಡ್ ಸ್ಟೋರಿ. ನಮ್ಮ ಹಿರಿಯ ನಾಯಕರೊಂದಿಗೆ ಮಾತನಾಡಿದ್ದು ಇ.ಡಿ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ನಮ್ಮ ಸಂಸದರು ಕೂಡ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಾರಿ ನಿರ್ದೇಶನಾಲಯದ ಅಧಿಕಾರ ದುರುಪಯೋಗದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು.

ನಾವು ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್.ಐ.ಟಿ ತನಿಖೆ ಮುಗಿದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸದನದಿಂದ ಹೊರಗೆ ಹೋರಾಟ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿವೆ. ಎಸ್.ಐ.ಟಿ ಯನ್ನು 31-5.2024 ರಂದು ರಚಿಸಲಾಗಿದೆ. 3-6-2024 ರಂದು ಸಿಬಿಐ ಗೆ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಅದರಲ್ಲಿ ಶುಚಿಸ್ಮಿತಾ ರಾವುಲ್, ದೀಪಾ ಹಾಗು ಕೃಷ್ಣಮೂರ್ತಿ ಇವರ ಮೇಲೆ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ. ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ. ಈ ರೀತಿ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ ಎಂದರು.

ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ  ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ. ಒಟ್ಟು 85.25 ಕೋಟಿ ಹಿಂಪಡೆದು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅಕ್ರಮವಾಗಿರುವುದು 85.63 ಕೋಟಿಗಳು. ಎಸ್.ಐ.ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಿದರು.

ಅಕ್ರಮವಾಗಲು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕಿನಿಂದ ದೂರು ನೀಡಲಾಗಿದ್ದು ಸಿಬಿಐ ತನಿಖೆ ಮಾಡುತ್ತಿದೆ. ಅವರೇನು ಮಾಡಿದ್ದಾರೆಂದು ತಿಳಿದಿಲ್ಲ. ಇ.ಡಿ ಯವರು  ಸ್ವಯಂ ಪ್ರೇರಿತವಾಗಿ ತನಿಖೆ ಪ್ರಾರಂಭ ಮಾಡಿದ್ದು, ನಾಗೇಂದ್ರ ಹಾಗೂ ದದ್ದಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿಟ್ಟಿದ್ದಾರೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ,ಹೆಚ್ಚುವರಿ  ನಿರ್ದೇಶಕ ಕಲ್ಲೇಶ್ ಎಂಬುವರು ಹೇಳಿಕೆಯನ್ನು ಕೊಟ್ಟಿದ್ದರೂ ಇವರೇ ಆದೇಶ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಒತ್ತಾಯ ಮಾಡಿದ್ದಾರೆ ಎಂದರು.

ಬಜೆಟ್ ನಲ್ಲಿ ಒಮ್ಮೆ  ಅನುಮೋದನೆಯಾದ ಮೇಲೆ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ಅದನ್ನು ನಿರ್ದೇಶಕರಿಗೆ ಹಾಗೂ ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ. ಇದು ಪ್ರಕ್ರಿಯೆ ಎಂದರು.

ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ  ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನೇನು ನಡೆಯಿತು ಎಂದು ಹೇಳಿದ್ದಾರೆ ಎಂದರು.

ಒಟ್ಟಾರೆಯಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿದೆ. ಅವರ ಉದ್ದೇಶ ನನ್ನ ಮತ್ತು ಸರ್ಕಾರದ ವರ್ಚಸ್ಸನ್ನು ಹಾಳು ಮಾಡಬೇಕು ಎನ್ನುವುದು ಎಂದರು.

ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧವಿದೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಹೀಗೆ ಮಾಡುತ್ತಿದ್ದಾರೆ. ನಾವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ದುರ್ಬಲ ವರ್ಗದವರ, ಬಡವರ, ರೈತರ , ಕಾರ್ಮಿಕರ ಪರವಾಗಿ ಇದ್ದೇವೆ. ಆದರೂ ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿರಬಾರದು, ದುರ್ಬಲಗೊಳಿಸಬೇಕೆಂಬ ಉದ್ದೇಶದಿಂದ ವಾಮಮಾರ್ಗವನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ಆರ್ಥಿಕ ಇಲಾಖೆಯಾಗಲೀ, ನಾನಾಗಲೀ ಈ ಹಗರಣಕ್ಕೆ ಸಂಬಂಧಪಟ್ಟಿಲ್ಲ. ಹಗರಣ ಆಗಿದೆ ಎಂದು ತನಿಖೆ ಮಾಡಿಸುತ್ತಿದ್ದೇವೆ.  ಮೃತ ಚಂದ್ರಶೇಖರ್ ಅವರ ಪತ್ನಿ ಕವಿತಾ ಅವರು ನೀಡಿರುವ ದೂರು, ಪದ್ಮನಾಭ ಅವರ ದೂರಿನನ್ವಯ ತನಿಖೆ ಸರಿಯಾದ ದಾರಿಯಲ್ಲಿ ಸಾಗಿದೆ ಎಂದರು.

ಆದರೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿರುವ ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸ್ ಟ್ರಕ್ ಟರ್ಮಿನಲ್, ಎ.ಪಿ .ಎಂ.ಸಿ ಹಾಗೂ ಕೋವಿಡ್ ಹಗರಣಗಳಲ್ಲಿ ಇ.ಡಿ ಬರಲೇ ಇಲ್ಲ ಎಂದು ಹೇಳಿದರು.

ಬಿಜೆಪಿ ಈ ಪ್ರಕರಣವನ್ನು ಸಿಬಿಐ ಗೆ ವಹಿಸಲು ಹೇಳುತ್ತಿದೆ. ಅವರು ವಿರೋಧಪಕ್ಷದಲ್ಲಿದ್ದಾಗ ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಅವರ ಸರ್ಕಾರ ಕೇಂದ್ರದಲ್ಲಿರುವುದರಿಂದ ಸಿಬಿಐ ಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ . ನಾವು ಅನೇಕ ಪ್ರಕರಣಗಳನ್ನು ಸಿಬಿಐ ಗೆ ವಹಿಸಿದ್ದೇವೆ. ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಪರೇಶ್ ಮೆಹ್ತಾ, ಡಿ.ಕೆ. ರವಿ, ಗಣಪತಿ, ಒಂದಂಕಿ ಲಾಟರಿ ಪ್ರಕರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಸರ್ಕಾರ ವಿವೇಚನೆಯನ್ನು ಆಧರಿಸಿ ಪ್ರಕರಣಗಳನ್ನು ವಹಿಸುತ್ತದೆ ಎಂದರು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಗಸೂಚಿಗಳ ಪ್ರಕಾರ 25 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತವಿದ್ದರೆ ಸಿಬಿಐ ತನಿಖೆ ಮಾಡಬಹುದು. ತನಿಖೆಗೆ ನಮ್ಮ ತಕರಾರಿಲ್ಲ. ಆದರೆ ಕಾನೂನು ಬಾಹಿರವಾಗಿ ತನಿಖೆ ಮಾಡುವುದನ್ನು ಖಂಡಿಸುತ್ತೇವೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುತ್ತಿದ್ದು ಇದನ್ನು ಖಂಡಿಸಲು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿಯೂ ಇದನ್ನು ನಾವು ಪ್ರಸ್ತಾಪಿಸಲಿದ್ದೇವೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದ ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯವು, ಪ್ರಕರಣದಲ್ಲಿ ಮಾಜಿ ಸಚಿವರಾದ ನಾಗೇಂದ್ರ ಅವರ ಹೆಸರನ್ನು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.

ಮೊದಲಿಗೆ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಸೃಷ್ಟಿಸುವುದು, ನಂತರ ತಮ್ಮ ಜೀತದಾಳುಗಳಂತಿರುವ ಸಿಬಿಐ, ಇಡಿ ಮೊದಲಾದ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸಿ ನಿರಪರಾಧಿಗಳನ್ನು ಅಪರಾಧಿಗಳೆಂದು ಬಿಂಬಿಸಿ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವುದು, ಈ‌ ಮೂಲಕ  ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸುವುದು ಕೇಂದ್ರದ ಬಿಜೆಪಿ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಮಾಡಿರುವ ಷಡ್ಯಂತ್ರ. ಅದನ್ನೇ ಇಲ್ಲಿಯೂ ಮಾಡಲು ಹೊರಟಿದೆ ಎಂದು‌ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರಾದ ಅಮಿತ್ ಶಾ ಅವರೇ, ನೀವು ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸುತ್ತಿರುವ ಸೇಡಿನ ರಾಜಕಾರಣವನ್ನು ನಮ್ಮ ಜನ ಗಮನಿಸುತ್ತಿದ್ದಾರೆ. ಈ ದುಷ್ಕೃತ್ಯಗಳ ಸರಣಿ‌ ಮುಂದುವರಿದರೆ ಜನತೆಯೇ ನಿಮ್ಮ ವಿರುದ್ಧ ಬಂಡೆದ್ದು ಪಾಠ ಕಲಿಸಲು ಸಿದ್ಧರಾಗಬಹುದು ಎಂದರು.

ಬೇರೆ ರಾಜ್ಯಗಳಲ್ಲಿ ಆಡಿದ ಈ ಕಳ್ಳಾಟವನ್ನು ಕರ್ನಾಟಕದಲ್ಲಿ ಆಡಲು ಮುಂದಾಗಬೇಡಿ. ಕನ್ನಡಿಗರು ಸಹನೆ, ಸೌಹಾರ್ದತೆಗೆ ಹೆಸರಾದವರಷ್ಟೆ ಅಲ್ಲ, ಅನ್ಯಾಯ, ಮೋಸವನ್ನು ಸಹಿಸದವರು, ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡಬಲ್ಲ ಛಾತಿ ಉಳ್ಳವರು ಕೂಡಾ ಆಗಿದ್ದಾರೆ ಎನ್ನುವುದು ನೆನಪಿರಲಿ ಎಂದು ಹೇಳಿದರು.

Ramesh Babu

Journalist

Recent Posts

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

5 hours ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

9 hours ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

13 hours ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

1 day ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

1 day ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

1 day ago